ಬಳ್ಳಾರಿ :
ಕಾಂಗ್ರೆಸ್ ನ ಹಿರಿಯ ನಾಯಕ ಅನಿಲ್ ಲಾಡ್ ಅವರಿಗೆ ಈ ಬಾರಿ ಸ್ಪರ್ಧಿಸಲು ಅವಕಾಶ ಸಿಕ್ಕಿಲ್ಲ. ಇದರಿಂದ ಅವರು ಬಂಡಾಯ ಎದ್ದಿದ್ದಾರೆ.
ಅನಿಲ್ ಲಾಡ್ ಅವರ ಬದಲು ಭರತ್ ರೆಡ್ಡಿ ಅವರಿಗೆ ಬಳ್ಳಾರಿ ನಗರದಲ್ಲಿ ಸ್ಪರ್ಧೆಗೆ ಅವಕಾಶ ಕೊಟ್ಟಿದೆ. ಈ ಹಿನ್ನಲೆಯಲ್ಲಿ ಅನಿಲ್ ಲಾಡ್ ಅವರು ಪಕ್ಷೇತರರಾಗಿ ಸ್ಪರ್ಧೆ ನಡೆಸುವುದು ಬಹುತೇಕ ಖಚಿತವಾಗಿದೆ.
ಕಲಘಟಗಿಯಲ್ಲಿ ಸೋತ ಸಂತೋಷ್ ಲಾಡ್ ಹಾಗೂ ನಿನ್ನೆ ಮೊನ್ನೆ ಪಕ್ಷಕ್ಕೆ ಬಂದ ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್ ನೀಡಲಾಗಿದೆ. ಆದರೆ ನನಗೆ ಯಾಕೆ ಟಿಕೆಟ್ ನಿರಾಕರಿಸಲಾಗಿದೆ ಎಂದು ಅನಿಲ್ ಲಾಡ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.