ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಜುಲೈ 20 ರಿಂದ ಎರಡು ದಿನ ಕೆಲ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ಇನ್ನು ಕೆಲ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.
ಜುಲೈ 20 ರಂದು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತ್ಯಂತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಇದ್ದು, ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗಲಿದೆ ಎಂದು ಮನ್ಸೂಚನೆ ಇದ್ದು, ಆರೆಂಜ್ ಅಲರ್ಟ್, ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಬಿರುಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ ಎಂದು ತಿಳಿಸಲಾಗಿದೆ.
ಜುಲೈ 21 ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಮನ್ಸೂಚನೆ ನೀಡಲಾಗಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 22 ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹೀಗಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಜುಲೈ 23 ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.