ಬೆಂಗಳೂರು: ‘ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನಗಳ ಅಕ್ರಮ ಹಂಚಿಕೆ ಆರೋಪಕ್ಕೆ ಸಂಬಂಧಿಸಿದ ತನಿಖೆಯನ್ನು ಸಿಬಿಐಗೆ ವಹಿಸಬೇಕು’ ಎಂದು ಕೋರಲಾದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಈ ಸಂಬಂಧ ದೂರುದಾರರೂ ಆದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು, ‘ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಶುಕ್ರವಾರ ಧಾರವಾಡ ಪೀಠದಿಂದ ಪ್ರಕಟಿಸಿದರು.