ಬೆಂಗಳೂರು : ಖ್ಯಾತ ನಿರೂಪಕಿ ಅನುಶ್ರೀ ಅವರಿಗೆ ಕಂಕಣ ಮಹೂರ್ತ ಕೂಡಿ ಬಂದಿದೆ. ರೋಷನ್ ಎಂಬುವರೊಂದಿಗೆ ಆಗಸ್ಟ್ 28ರಂದು ಮದುವೆಯಾಗಲಿದ್ದಾರೆ. ಎರಡು ಕುಟುಂಬದ ಒಪ್ಪಿಗೆಯೊಂದಿಗೆ ಈ ಮದುವೆ ನಡೆಯುತ್ತಿದೆ. ಸರಿಗಮಪ ಸೇರಿದಂತೆ ಅನೇಕ ಕಾರ್ಯಕ್ರಮಗಳಲ್ಲಿ ಅನುಶ್ರೀ ತಮ್ಮ ವಿಶಿಷ್ಟ ಶೈಲಿಯ ನಿರೂಪಣೆಯಿಂದ ಕನ್ನಡಿಗರ ಮನ ಗೆದ್ದಿದ್ದಾರೆ. ರೋಷನ್ ಬೆಂಗಳೂರಿನಲ್ಲಿ ಐಟಿ ಉದ್ಯಮಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.