ಬೆಳಗಾವಿ :
ಬೆಳಗಾವಿ ನಗರದ ಪೈ ರೆಸಾರ್ಟ್ ನಲ್ಲಿ ಕರ್ನಾಟಕ ಕ್ಷತ್ರೀಯ ಮರಾಠಾ ಪರಿಷತ್ ಬೆಳಗಾವಿ ಜಿಲ್ಲಾ ಘಟಕದ ಸಭೆ ಸಮಾಜದಅಧ್ಯಕ್ಷ ಅನಿಲ ಬೆನಕೆ ರವರ ನೇತೃತ್ವದಲ್ಲಿ ಜರುಗಿತು.
ಸಭೆಯಲ್ಲಿ ಮರಾಠಾ ಸಮಾಜದ ಸಂಘಟನೆ ಹಾಗೂ ಪದಾಧಿಕಾರಿಗಳ ಪದಗ್ರಹಣ ಮಾಡುವ ಕುರಿತು ಚರ್ಚಿಸಲಾಯಿತು. ಬೆಳಗಾವಿ ನಗರದ ಸದಾಶಿವ ನಗರದಲ್ಲಿ ಛತ್ರಪತಿ ಶ್ರೀ ಶಾಹೂ ಮಹಾರಾಜ ವಸತಿ ನಿಲಯದ ನಿರ್ಮಾಣದ ಕುರಿತು ಕೋರ್ ಕಮೀಟಿ ರಚಿಸುವ ಹಾಗೂ ಅದರ ರೂಪು ರೇಷೆಗಳ ಕುರಿತು ಚರ್ಚೆಯನ್ನು ನಡೆಸಲಾಯಿತು.
ಅದರಂತೆಯೇ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಉತ್ತರ ಕನ್ನಡ, ಬೆಳಗಾವಿ ಹಾಗೂ ಚಿಕ್ಕೋಡಿ ಕ್ಷೇತ್ರದ ಟೆಕೆಟ್ಗಳನ್ನು ಮರಾಠಾ ಸಮುದಾಯಕ್ಕೆ ನೀಡುವ ಕುರಿತು ಚರ್ಚಿಸಲಾಯಿತು. ಈ ಕುರಿತು ದಿನಾಂಕ 24 ರಂದು ಬೆಳಗಾವಿ ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದಲ್ಲದೆ ಬೆಂಗಳೂರಿನಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ರಾಜ್ಯಾಧ್ಯಕ್ಷರನ್ನೊಳಗೊಂಡ ನಿಯೋಗವು ಪತ್ರಿಕಾಗೋಷ್ಠಿ ನಡೆಸಿ ರಾಷ್ಟ್ರೀಯ ಪಕ್ಷಗಳು ಮೇಲಿನ ಮೂರು ಲೋಕಸಭಾ ಕ್ಷೇತ್ರಗಳಿಗೆ ಮರಾಠಾ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠಾ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಮಾಜಿ ಶಾಸಕ ಅನಿಲ ಬೆನಕೆ, ಜಿಲ್ಲಾ ಉಪಾಧ್ಯಕ್ಷ ದಿಲೀಪ ಪವಾರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಂಜು ಭೋಸಲೆ, ಕಿತ್ತೂರು ತಾಲೂಕು ಉಪಾಧ್ಯಕ್ಷ ಬಸವರಾಜ ಆರೇರ, ಖಾನಾಪುರ ತಾಲೂಕು ಸಂಚಾಲಕ ರಾವುಳ ಪವಾರ, ಖಾನಾಪುರ ತಾಲೂಕು ಉಪಾಧ್ಯಕ್ಷ ಕ್ಯಾಪ್ಟನ್ ಚಂಗಪ್ಪ ಪಾಟೀಲ ಹಾಗೂ ಇತರರು ಉಪಸ್ಥಿತರಿದ್ದರು.