This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಕರೆನ್ಸಿ ನೋಟುಗಳಲ್ಲಿ ಲಕ್ಷ್ಮೀ , ಗಣೇಶನ ಭಾವಚಿತ್ರ ಮುದ್ರಿಸಲು ಮನವಿ Request to print portrait of Lakshmi Ganesha in currency notes


 

ದೆಹಲಿ :
ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವ ನಿಟ್ಟಿನಲ್ಲಿ ಕರೆನ್ಸಿ ನೋಟುಗಳಲ್ಲಿ ಲಕ್ಷ್ಮೀ ಮತ್ತು ಗಣೇಶನ ಭಾವಚಿತ್ರ ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿ ಮಾಡಿದ್ದಾರೆ.

ಕರೆನ್ಸಿಯಲ್ಲಿ ಮಹಾತ್ಮ ಗಾಂಧೀಜಿ ಭಾವಚಿತ್ರ ಜತೆಗೆ ಲಕ್ಷ್ಮೀ, ಗಣೇಶನ ಫೋಟೋ ಹಾಕಬೇಕೆಂದು ನನ್ನ ಬಯಕೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರಕ್ಕೆ ಮನವಿ ಮಾಡುತ್ತೇನೆ. ದೇಶದ ರೂಪಾಯಿ ಮೌಲ್ಯ ನಿರಂತರ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆ ಬಿಕ್ಕಟ್ಟಿನಲ್ಲಿದ್ದು ಆರ್ಥಿಕತೆ ಸುಧಾರಿಸಲು ಹಲವಾರು ಹಂತಗಳಿವೆ. ಇದರಲ್ಲಿ ಹೆಚ್ಚಿನ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವ ಮತ್ತು ದೇಶದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ನಾವು ಎಷ್ಟೇ ಪ್ರಯತ್ನಪಟ್ಟರೂ ಕೆಲವೊಂದು ಸಲ ಉತ್ತಮ ಫಲಿತಾಂಶ ಬಾರದೇ ಹೋಗುತ್ತದೆ. ಈ ನಿಟ್ಟಿನಲ್ಲಿ ದೇವರ ಆಶೀರ್ವಾದ ಬೇಕಾಗಿರುತ್ತದೆ. ಅದಕ್ಕಾಗಿ ನೋಟುಗಳಲ್ಲಿ ಲಕ್ಷ್ಮೀ ಮತ್ತು ಗಣೇಶ ದೇವರ ಭಾವಚಿತ್ರಗಳ ಇದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ ಎಂದು ಅವರು ತಿಳಿಸಿದ್ದು ಇಂಡೋನೇಶ್ಯದ ಕರೆನ್ಸಿ ಮೇಲೆ ಗಣೇಶ ದೇವರ ಭಾವಚಿತ್ರಗಳನ್ನು ಮುದ್ರಿಸಲಾಗಿದೆ ಎಂದು ತಿಳಿಸಿದ್ದಾರೆ.


Jana Jeevala
the authorJana Jeevala

Leave a Reply