ದೆಹಲಿ : ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಉಗ್ರರು 26 ಅಮಾಯಕ ಪ್ರವಾಸಿಗರನ್ನು ಬಲಿಪಡೆದಿದ್ದಕ್ಕೆ ಭಾರತೀಯ ಸೇನೆ ಪಾಕ್ ವಿರುದ್ಧ ಪ್ರತಿಕಾರ ತೀರಿಸಿಕೊಂಡಿದೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಪಾಕಿಸ್ತಾನಿ ಉಗ್ರರ ನೆಲೆಗಳನ್ನು ನೆಲಸಮಗೊಳಿಸಿದೆ.
ತಡರಾತ್ರಿ 1:30ರ ಸುಮಾರಿಗೆ ಭಾರತೀಯ ಸೇನೆ ಪಾಕಿಸ್ತಾನದ ಮೇಲೆ ನಡೆಸಿದ ಆರಪೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ 21 ಭಯೋತ್ಪಾದಕರ ನೆಲೆಗಳನ್ನು ಧ್ವಂಸಗೊಳಿಸಿದೆ. 100ಕ್ಕೂ ಹೆಚ್ಚು ಉಗ್ರರು ಸಾವನ್ನಪ್ಪಿದ್ದಾರೆ.
ಭಾರತೀಯ ಸೇನೆ ನೀಡಿದ ಮಾಹಿತಿ ಪ್ರಕಾರ ಮೋಸ್ಟ್ ವಾಂಟೆಡ್ ಉಗ್ರ ಮಸೂದ್ ಅಜರ್ ಹಾಗೂ ಆತನ ಕುಟುಂಬದ 14 ಸದಸ್ಯರು ಮೃತಪಟ್ಟಿದ್ದಾರೆ. ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಮಸೂದ್ ಅಜರ್ ಕುಟುಂಬ, ಆತನ ಸಹೋದರ, ಸಹೋದರಿ ಸೇರಿದಂತೆ ಇಡೀ ಕುಟುಂಬವೇ ನಾಮಾವಶೇಷಗೊಂಡಿದೆ ಎಂದು ತಿಳಿದುಬಂದಿದೆ.