ಬೆಳಗಾವಿ :
ಬೆಳಗಾವಿ ತಾಲೂಕು ನಿಲಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಗೆ ಸಂಬಂಧಿಸಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಗ್ರಾಮ ಪಂಚಾಯತ್ ಅಧ್ಯಕ್ಷರಾಗಿರುವ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಶೀಲಾ ತಿಪ್ಪಣ್ಣವರ ಚುನಾವಣೆ ನಡೆಯುತ್ತಿರುವಾಗ ಹೊರಬಂದು ಪೊಲೀಸರು ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಭಯ ಪಕ್ಷಗಳ ಬೆಂಬಲಿತರ ನಡುವೆ ನೇರ ಚುನಾವಣೆ ನಡೆಯುತ್ತಿದೆ. ಸದ್ಯ ಹೆಚ್ಚಿನ ಪೊಲೀಸರು ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ.