ಬೆಳಗಾವಿ :
ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆಕ್ಕಿನಕೇರಿ ಗ್ರಾಮದಲ್ಲಿ ನೂತನ ಕಾಂಕ್ರೀಟ್ ರಸ್ತೆಗಳ ನಿರ್ಮಾಣ ಕಾಮಗಾರಿಗಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು.
ಗ್ರಾಮದ ರಸ್ತೆಗಳ ಅಭಿವೃದ್ಧಿಗಾಗಿ ಅವರು ಶಾಸಕರ ನಿಧಿಯಿಂದ (MLA Fund) ಹಣ ಬಿಡುಗಡೆ ಮಾಡಿಸಿದ್ದು, ಸುದೀರ್ಘ ಕಾಲ ಬಾಳಿಕೆ ಬರುವ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಒತ್ತು ನೀಡಲಾಗುತ್ತಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕು ಎಂದರು.
ಈ ಸಂದರ್ಭದಲ್ಲಿ ಯುವರಾಜ ಕದಂ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಲ್ಲಪ್ಪ, ಗಜಾನನ ಮೋರೆ, ಮಾರುತಿ ಗೌಡೆಕರ್, ಮಾರುತಿ, ಗ್ರಾಮ ಪಂಚಾಯಿತಿಯ ಸದಸ್ಯರು, ಗ್ರಾಮದ ಮುಖಂಡರು, ಮಹಿಳೆಯರು ಉಪಸ್ಥಿತರಿದ್ದರು.