ಮುಂಬೈ : ಭಾರತ ಕ್ರಿಕೆಟ್ ತಂಡದ ಅತ್ಯಂತ ಯಶಸ್ವಿ ಆಟಗಾರರಲ್ಲಿ ಒಬ್ಬರಾಗಿರುವ ರೋಹಿತ್ ಶರ್ಮಾ ಅವರು ಟೆಸ್ಟ್ ಕ್ರಿಕೆಟ್ ಗೆ ಬುಧವಾರದಂದು ನಿವೃತ್ತಿ ಘೋಷಣೆ ಮಾಡಿದ್ದಾರೆ.
ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ಕ್ರಿಕೆಟ್ ತಂಡ ಅಪ್ರತಿಮ ಸಾಧನೆ ಮಾಡಿದೆ. ಅವರು ಈಗಾಗಲೇ ಟಿ ಟ್ವೆಂಟಿ ಕ್ರಿಕೆಟ್ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಇದೀಗ ಅವರು ಟೆಸ್ಟ್ ಕ್ರಿಕೆಟ್ ಸಹ ನಿವೃತ್ತಿ ಘೋಷಣೆ ಮಾಡಿದ್ದಾರೆ.
ಐಪಿಎಲ್ ನಲ್ಲಿ ಮುಂಬೈ ಪರ ಆಡುತ್ತಿರುವ
38 ವರ್ಷದ ರೋಹಿತ್ ಶರ್ಮಾ, ಅಂತರರಾಷ್ಟ್ರೀಯ ಟ್ವೆಂಟಿ-20 ಕ್ರಿಕೆಟ್ಗೆ ಈಗಾಗಲೇ ನಿವೃತ್ತಿ ಘೋಷಿಸಿದ್ದಾರೆ.
ಇದರೊಂದಿಗೆ ಹಿಟ್ಮ್ಯಾನ್’ ಖ್ಯಾತಿಯ ರೋಹಿತ್ 50 ಓವರ್ಗಳ ಕ್ರಿಕೆಟ್ನಲ್ಲಿ ಮುಂದುವರಿಯಲಿದ್ದಾರೆ.
ಟೆಸ್ಟ್ ಕ್ರಿಕೆಟ್ನಲ್ಲಿ ರೋಹಿತ್ ಸಾಧನೆ ಇಂತಿದೆ.
ಪಂದ್ಯ : 67
ರನ್ : 4,301
ಶತಕ : 12
ಅರ್ಧಶತಕ: 18
ಸರಾಸರಿ : 40.57