This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಕಟ್ಟಡ ಉದ್ಘಾಟನೆ ಬುಧವಾರ Sangolli Rayanna First Class Unit College building inaugurated on Wednesday


 

ಬೆಳಗಾವಿ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮವನ್ನು ದಿನಾಂಕ 21-12-2022 ರಂದು ಬೆಳಗಿನ 10:೦೦ ಗಂಟೆಗೆ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೂತನ ಕಟ್ಟಡ ಉದ್ಘಾಟನೆ ಮಾಡಲಿದ್ದಾರೆ. ಕರ್ನಾಟಕ ಸರ್ಕಾರದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಉಪಸ್ಥಿತರಿರುವರು. ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿಶೇಷ ಆಮಂತ್ರಿತರಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ. ರಾಜೀವ ಉಪಸ್ಥಿತರಿರುವರು.

ಬೆಳಗಾವಿಯ ಎಲ್ಲಾ ಸಂಸದರು, ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಉತ್ತರ ವಲಯ ಬೆಳಗಾವಿ ಆರಕ್ಷಕ ಮಹಾನಿರೀಕ್ಷಕರು, ಬೆಳಗಾವಿಯ ಜಿಲ್ಲಾಧಿಕಾರಿಗಳು, ಬೆಳಗಾವಿ ನಗರದ ಪೊಲೀಸ್ ಆಯುಕ್ತರು, ಬೆಳಗಾವಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗಳು ಆಮಂತ್ರಿತರಾಗಿರುವರು.

ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ರಾಮಚಂದ್ರಗೌಡ, ಕುಲ ಸಚಿವೆ ಕೆ. ಟಿ. ಶಾಂತಲಾ, ಮೌಲ್ಯಮಾಪನ ಕುಲಸಚಿವ ಪ್ರೊ. ಶಿವಾನಂದ ಗೊರನಾಳೆ, ಹಣಕಾಸು ಅಧಿಕಾರಿ ಪ್ರೊ. ಎಸ್. ಬಿ. ಆಕಾಶ ಹಾಗೂ ವಿವಿಯ ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರು, ಉನ್ನತ ಅಧಿಕಾರಿಗಳು ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Jana Jeevala
the authorJana Jeevala

Leave a Reply