ಬೆಂಗಳೂರು :
ಕರ್ನಾಟಕ ರಾಜಕೀಯ ರಂಗದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ ಸ್ಯಾಂಟ್ರೋ ರವಿಯನ್ನು ಕೊನೆಗೂ ಬಂಧಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಅರಗ ಜ್ಞಾನೇಂದ್ರ
ಅವರು ಸ್ಯಾಂಟ್ರೋ ರವಿ ವಿರುದ್ಧ ದಾಖಲಾಗಿರುವ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸಲು ಮೈಸೂರು ಪೊಲೀಸರಿಗೆ ಬಂಧಿಸಲು ಸೂಚನೆ ನೀಡಿದ್ದರು. ಇದೀಗ ಸ್ಯಾಂಟ್ರೋ ರವಿಯನ್ನು ಗುಜರಾತಿನಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕರ್ನಾಟಕದಿಂದ ಪರಾರಿಯಾಗಿದ್ದ ರವಿ ವಿದೇಶಕ್ಕೆ ಹಾರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು. ಆತನ ಬಂಧನಕ್ಕೆ ಪೊಲೀಸ್ ತಂಡವನ್ನು ರಚಿಸಲಾಗಿತ್ತು. ಇದೀಗ ಆತನನ್ನು ಬಂಧಿಸುವ ಮೂಲಕ
ಕರ್ನಾಟಕ ಪೊಲೀಸರು ದೊಡ್ಡ ಯಶಸ್ಸು ಸಾಧಿಸಿದ್ದಾರೆ.