ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಮಂಗಳವಾರ ಮಧ್ಯಾಹ್ನ 12-40ಕ್ಕೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಘೋಷಿಸಿದ್ದು, ಈ ಬಾರಿಯೂ ನಿರೀಕ್ಷೆಯಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿದ್ದು, ಯಾದಗಿರಿ(ಶೇ.48.45) ಕೊನೆಯ ಸ್ಥಾನ ಪಡೆದಿದೆ. ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.
ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
ಮಾರ್ಚ್ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯ ಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು.
ಏಪ್ರಿಲ್ 3ರ ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿದಿದ್ದರಿಂದ, ಫಲಿತಾಂಶವನ್ನು ಘೋಷಿಸಿದೆ. ವಿದ್ಯಾರ್ಥಿಗಳು ಅಪರಾಹ್ನ 1-30ಕ್ಕೆ ವೆಬ್ ಸೈಟ್ ನಲ್ಲಿ ಫಲಿತಾಂಶ ನೋಡಬಹುದಾಗಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಬಳ್ಳಾರಿ ಮೂಲದ ಸಂಜನಾ ಬಾಯಿ ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಸಂಜನಾ 600/597 ಅಂಕ ಗಳಿಸಿದ್ದಾರೆ.
PUC Results 2025: ಯಾವ ಜಿಲ್ಲೆ ಸಾಧನೆ; ಫಲಿತಾಂಶವನ್ನು ಇಲ್ಲಿ ಚೆಕ್ ಮಾಡಿ
ಬೆಂಗಳೂರು: 2025 ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.
ಮಂಡಳಿಯ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಶಿಕ್ಷಣ ಸಚಿವರ ಸುದ್ದಿಗೋಷ್ಠಿ ನಂತರ ಮಧ್ಯಾಹ್ನ 12 ಗಂಟೆಯ ನಂತರ https://karresults.nic.in/ಫಲಿತಾಂಶವನ್ನು ಪರಿಶೀಲಿಸಬಹುದು.
2024-25 ರ ದ್ವಿತೀಯ ಪಿಯು ಪರೀಕ್ಷೆ-1 ಮಾರ್ಚ್ 1 ರಿಂದ ಆರಂಭವಾಗಿ ಮಾರ್ಚ್ 20ಕ್ಕೆ ಅಂತ್ಯವಾಗಿತ್ತು. ರಾಜ್ಯದ 5,050 ಪದವಿಪೂರ್ವ ಕಾಲೇಜುಗಳ ಸುಮಾರು 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.