ದೆಹಲಿ:
ಸೋಮವಾರದಿಂದ ವಿಧಾನಮಂಡಲ ಅಧಿವೇಶನ ಆರಂಭವಾಗುತ್ತಿದ್ದು, ಇದೇ ವೇಳೆ ಬಿಜೆಪಿ ಹೈಕಮಾಂಡ್ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷರ ಆಯ್ಕೆಗಾಗಿ ಇಬ್ಬರು ವೀಕ್ಷಕರನ್ನು ಬೆಂಗಳೂರಿಗೆ ಕಳುಹಿಸಲಿದೆ.
ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಜೊತೆ ಸಭೆಯ ನಂತರ ಮಾತನಾಡಿದ ಬಿ.ಎಸ್. ಯಡಿಯೂರಪ್ಪ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಸೋಮವಾರ ಕೇಂದ್ರದ ವೀಕ್ಷಕರಾಗಿ ವಿನೋದ ತಾವ್ಡೆ ಮತ್ತು ಮನ್ಸುಖ್ ಮಾಂಡವೀಯಾ ಇಬ್ಬರು ಬರುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ವೀಕ್ಷಕರು ರಾಜ್ಯ ಬಿಜೆಪಿ ಶಾಸಕರಿಂದ ವಿಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಆಯ್ಕೆಯ ಬಗ್ಗೆ ಮಾಹಿತಿ ಸಂಗ್ರಹ ಮಾಡುತ್ತಾರೆ. ನಂತರ ಕೇಂದ್ರದ ನಾಯಕರಿಗೆ ಈ ಬಗ್ಗೆ ವರದಿ ಒಪ್ಪಿಸಲಿದ್ದಾರೆ. ಆ ಬಳಿಕ ವಿಪಕ್ಷ ನಾಯಕ ಸ್ಥಾನಕ್ಕೆ ನೇಮಕ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.
ವರಿಷ್ಠರಿಗೆ ಅಭಿಪ್ರಾಯ ತಿಳಿಸಿದ್ದೇನೆ. ಅಗತ್ಯ ಬಿದ್ದರೆ ಎರಡು ದಿನಗಳ ಬಳಿಕ ಮತ್ತೆ ಕರೆಯುತ್ತೇವೆ ಎಂದು ಹೇಳಿದ್ದಾರೆ ಎಂದು ತಿಳಿಸಿದರು.