ಬೆಳಗಾವಿ : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಇದೇ ಮೊದಲ ಬಾರಿಗೆ ಶಾಲಿನಿ ರಜನೀಶ್ ಅವರು ಇದೇ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಆಗಸ್ಟ್ 5 ರಂದು ಮುಖ್ಯಮಂತ್ರಿಗಳ ಜೊತೆ ಆಗಮಿಸುವ ಅವರು ಪ್ರವಾಹ ಪೀಡಿತ ಪ್ರದೇಶಗಳ ಪರಿಶೀಲನೆ ನಡೆಸಲಿದ್ದಾರೆ. ಶಾಲಿನಿ ರಜನೀಶ್ ಅವರು ಜಿಲ್ಲಾಧಿಕಾರಿಯಾಗಿದ್ದಾಗ ಬೆಳಗಾವಿ ಜಿಲ್ಲೆಗೆ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ಇದೀಗ ಮತ್ತೆ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ತಲೆದೂರಿದ್ದು ಇದೇ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಯಾಗಿ ಮತ್ತೆ ಭೇಟಿ ನೀಡುತ್ತಿದ್ದಾರೆ.