ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಡಾ.ಶಾಲಿನಿ ರಜನೀಶ್ ಅವರನ್ನು ಅಭಿವೃದ್ಧಿ ಆಯುಕ್ತರ ನೇಮಕ ಮಾಡಲಾಗಿದೆ.
ಕರ್ನಾಟಕದ ಮತ್ತೊಬ್ಬ ಹಿರಿಯ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರು ಮೇ 31 ರಂದು ನಿವೃತ್ತರಾದ ಹಿನ್ನೆಲೆಯಲ್ಲಿ ತೆರವಾದ ಈ ಹುದ್ದೆಗೆ ಡಾ.ಶಾಲಿನಿ ರಜನಿ ಅವರನ್ನು ನೇಮಿಸಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕದ ಆಡಳಿತಾಂಗದಲ್ಲಿ ಶಾಲಿನಿ ರಜನೀಶ್ ಮುಖ್ಯ ಕಾರ್ಯದರ್ಶಿ ನಂತರ ಎರಡನೇ ಸ್ಥಾನದಲ್ಲಿ ಇರಲಿದ್ದಾರೆ. ಪ್ರಸ್ತುತ, ಯೋಜನೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಒಂದೂವರೆ ದಶಕದ ಹಿಂದೆ ಅವರು ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅಪಾರ ಹೆಸರು ಗಳಿಸಿದ್ದರು.