ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಲೋಕಸಭಾ ಮತ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಗದೀಶ್ ಶೆಟ್ಟರ್ ಭರ್ಜರಿ ಗೆಲುವು ಪಡೆಯುವ ಹಾದಿಯಲ್ಲಿ ಸಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಜ್ಯದ ಪ್ರಭಾವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರನ್ನು 1,34,800ಕ್ಕೂ ಹೆಚ್ಚು ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.
ಜಗದೀಶ್ ಶೆಟ್ಟರ್ ಈ ಮೂಲಕ ಬೆಳಗಾವಿಯಲ್ಲಿ ತಮ್ಮ ಅಡ್ರೆಸ್ ಕೇಳಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ದೊಡ್ಡ ಮುಖಭಂಗವನ್ನುಂಟು ಮಾಡಿದ್ದಾರೆ.