ಬೆಂಗಳೂರು :
ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಇದೀಗ ಬಿಜೆಪಿ ವಿರುದ್ಧ ಭರ್ಜರಿ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದಾರೆ.
ಬಿಜೆಪಿಯ ಮಾಜಿ ಶಾಸಕರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರಲು ಅವರು ಸ್ವತಃ ಭೂಮಿಕೆ ತಯಾರಿಸುತ್ತಿದ್ದಾರೆ. ಶಿರಹಟ್ಟಿಯ ಮಾಜಿ ಶಾಸಕ ರಾಮಣ್ಣ ಲಮಾಣಿ, ಮೂಡಿಗೆರೆ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ, ಕುಂದಗೋಳ ಮಾಜಿ ಶಾಸಕ ಚಿಕ್ಕನಗೌಡರ್ ಅವರನ್ನು ಕಾಂಗ್ರೆಸಿಗೆ ಕರೆತರಲು ಸ್ವತಃ ಮುಂದಾಗಿದ್ದಾರೆ. ಈ ಮೂಲಕ ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮಗೆ ಬಿಜೆಪಿ ಟಿಕೆಟ್ ನೀಡದೇ ಇರುವುದರಿಂದ ಆ ಪಕ್ಷದ ವಿರುದ್ಧ ಸೇಡು ತೀರಿಸಿಕೊಳ್ಳಲು ಅತ್ಯಂತ ಸಕ್ರಿಯರಾಗಿ ಶೆಟ್ಟರ್ ರಣಕಣಕ್ಕಿಳಿದಿದ್ದಾರೆ.