ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೋದಗಾ ಹಾಗೂ ಸುಳೇಬಾವಿ ಗ್ರಾಮಗಳ ಮಹಾಲಕ್ಷ್ಮಿ ದೇವಸ್ಥಾನಗಳಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ದೇವರ ದರ್ಶನ ಪಡೆದು, ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಅಧ್ಯಕ್ಷ ಸುಭಾಷ ಪಾಟೀಲ,ಮಾಜಿ ಶಾಸಕ ಸಂಜಯ ಪಾಟೀಲ,
ಬಿಜೆಪಿ ಮಂಡಲ ಅಧ್ಯಕ್ಷ ಯುವರಾಜ ಜಾಧವ್, ಪ್ರಮುಖರಾದ ಧನಂಜಯ ಜಾಧವ್, ಚೇತನ ಅಂಗಡಿ, ಸ್ಥಳೀಯ ಮುಖಂಡರು ಹಾಗೂ ಆಯಾ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು.