ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ದಾಖಲೆ ಬರೆದಿದ್ದಾರೆ. ಈವರೆಗೆ ದೇವರಾಜ ಅರಸು ಅವರ ಹೆಸರಿನಲ್ಲಿದ್ದ ಈ ದಾಖಲೆಯನ್ನು ಅವರು ಮುರಿದಿದ್ದಾರೆ. ಬಜೆಟ್ ಮಂಡನೆಯಲ್ಲೂ ಸಿದ್ದರಾಮಯ್ಯ ಅವರು ಮುಂದಿದ್ದಾರೆ.
7 ವರ್ಷ 239 ದಿನಗಳ ಕಾಲ ಡಿ. ದೇವರಾಜ ಅರಸು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದರು. ಸಿದ್ದರಾಮಯ್ಯ ಕೂಡ ಇಂದಿಗೆ 7 ವರ್ಷ 239 ದಿನ ಪೂರೈಸಿದ್ದಾರೆ. ದೇವರಾಜ ಅರಸು ಅವರು ಸತತವಾಗಿ ಏಳೂವರೆ ವರ್ಷ ಅಧಿಕಾರದಲ್ಲಿದ್ದರೆ ಸಿದ್ದರಾಮಯ್ಯ ಮೊದಲ ಅವಧಿ ಪೂರ್ಣಗೊಂಡ ಬಳಿಕ ಮತ್ತೆ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರಲಿಲ್ಲ.
2018ರ ವಿಧಾನಸಭೆ ಚುನಾವಣೆಯ ಫಲಿತಾಂಶ ಅತಂತ್ರವಾದ ಕಾರಣಕ್ಕೆ ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ಮೈತ್ರಿ ಸರ್ಕಾರ ರಚಿಸಿತ್ತು. ಆಗ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂತು, ಆದರೆ ಕೇವಲ 14 ತಿಂಗಳಿಗೇ ಸರ್ಕಾರ ಪತನವಾಗಿತ್ತು. ಬಳಿಕ ಅಧಿಕಾರಕ್ಕೆ ಬಂದ ಬಿಜೆಪಿಯಿಂದ ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಕ್ರಮವಾಗಿ ಮುಖ್ಯಮಂತ್ರಿಗಳಾಗಿದ್ದರು.
ಅದಾದ ಬಳಿಕ 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಮತ್ತೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇದೀಗ 7 ವರ್ಷ 240 ದಿನಗಳ ಕಾಲ ಪೂರೈಸಿರುವ ಸಿದ್ದರಾಮಯ್ಯ ದೇವರಾಜ ಅರಸು ಅವರ ದಾಖಲೆಯನ್ನು ಮುರಿಯುವ ಮೂಲಕ ಕರ್ನಾಟಕದಲ್ಲಿ ದೀರ್ಘಾವಧಿ ಅವಧಿಯ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಕರ್ನಾಟಕ ಕಂಡ ದೀರ್ಘಾವಧಿ ಮುಖ್ಯಮಂತ್ರಿಗಳು
ಸಿದ್ದರಾಮಯ್ಯ, ಮುಖ್ಯಮಂತ್ರಿ
ಜ.7ಕ್ಕೆ- 7 ವರ್ಷ, 240 ದಿನ
ದೇವರಾಜ ಅರಸು, ಮಾಜಿ ಸಿಎಂ
7 ವರ್ಷ, 239 ದಿನ
ರಾಮಕೃಷ್ಣ ಹೆಗಡೆ
5 ವರ್ಷ, 216 ದಿನ
ಎಸ್. ನಿಜಲಿಂಗಪ್ಪ
5 ವರ್ಷ, 175 ದಿನ
ಬಿ.ಎಸ್. ಯಡಿಯೂರಪ್ಪ,
5 ವರ್ಷ, 82 ದಿನ
ದೇವರಾಜ ಅರಸು ಅವರು 1972ರ ಮಾರ್ಚ್ 77 ರಿಂದ 27ರ ಡಿಸೆಂಬರ್ 31ರವರೆಗೆ ಮೊದಲ ಅವಧಿಯಲ್ಲಿ ಐದು ವರ್ಷ ಒಂಬತ್ತು ತಿಂಗಳು 1 ದಿನ ಮುಖ್ಯಮಂತ್ರಿ ಆಗಿದ್ದರು. ನಂತರ 59 ದಿನ ರಾಷ್ಟ್ರಪತಿ ಆಳ್ವಿಕೆಯಲ್ಲಿ ಇತ್ತು. ನಂತರ 1978ರ ಫೆಬ್ರವರಿ 28ರಿಂದ 1980ರ ಜನವರಿ 7ರವರೆಗೆ ಅರಸು ಅವರು ಮುಖ್ಯಮಂತ್ರಿಯಾಗಿದ್ದರು.
ಸಿದ್ದರಾಮಯ್ಯ 2013ರ ಮೇ 13 ರಿಂದ 2018 ರ ಮೇ 17ರ ವರೆಗೆ ಮುಖ್ಯಮಂತ್ರಿಯಾಗದ್ದರು, ಎರಡನೇ ಅವಧಿಯಲ್ಲಿ 2023ರ ಮೇ 20ರಿಂದ ಎರಡನೆಯ ಅವಧಿಗೆ ಮುಖ್ಯಮಂತ್ರಿ ಆಗಿ ಮುಂದುವರಿದಿದ್ದಾರೆ. ಎರಡನೆಯ ಅವಧಿಗೆ 963 ದಿನ ಪೂರ್ಣಗೊಳಿಸಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಅತೀ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿ ದಾಖಲೆ ಬರೆದಿದ್ದಾರೆ
1978 ರಲ್ಲಿ ಮೈಸೂರಿನ ತಾಲೂಕು ಬೋರ್ಡ್ ಸದಸ್ಯ, ಶಾಸಕ, ಹಣಕಾಸು ಸಚಿವ, ವಿಪಕ್ಷದ ನಾಯಕ, ಎರಡು ಬಾರಿ ಉಪಮುಖ್ಯಮಂತ್ರಿ, ಶಾಸಕಾಂಗ ಪಕ್ಷದ ನಾಯಕರೂ ಆಗಿ ಕಾರ್ಯನಿರ್ವಹಿಸಿದ್ದಾರೆ.


