ಬೆಂಗಳೂರು :ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ.ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಹಣಾಹಣಿ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ದಯಪಾಲಿಸಿದೆ. ಗುರುವಾರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.