ಬೆಂಗಳೂರು :
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ವರಿಷ್ಠರಾದ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಎಚ್ ಎಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಾಗತಿಸಿದರು.
ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ಮಹತ್ವದ ಸಭೆ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ದೇಶದ ರಾಜಕೀಯ ಪಕ್ಷಗಳ ಅತಿರಥ ದಿಗ್ಗಜರು ಇದೀಗ ಬೆಂಗಳೂರಿನಲ್ಲಿ ಇದ್ದಾರೆ. ಕಾಂಗ್ರೆಸ್ ಅಧಿನಾಯಕ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ, ಬೆಂಗಳೂರಿಗೆ ಬಂದಿದ್ದು ಕಾಂಗ್ರೆಸ್ ರಾಜ್ಯ ನಾಯಕರು ಇವರ ಭೇಟಿಗೆ ಕಾತುರದಿಂದಿದೆ.