ಸಿದ್ದರಾಮೇಶ್ವರ ಕಾಲೇಜು ಭೂಮಿಪೂಜೆ ಇಂದು


 

ಬೆಳಗಾವಿ :
ಬೆಳಗಾವಿ ನಾಗನೂರು ರುದ್ರಾಕ್ಷಿಮಠದ ಆವರಣದಲ್ಲಿ ದಿನಾಂಕ 31-12-2021
ರಂದು ಬೆಳಗಿನ 9-00 ಗಂಟೆಗೆ ಸಿದ್ಧರಾಮೇಶ್ವರ ಪದವಿಪೂರ್ವ ಕಾಲೇಜಿನ ಕಟ್ಟಡದ
ಭೂಮಿಪೂಜೆ ನೆರವೇರಲಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

ಗದುಗಿನ ತೋಂಟದಾರ್ಯ ಮಠದ ಜಗದ್ಗುರು ಶ್ರೀ ತೋಂಟದ ಸಿದ್ಧರಾಮ ಮಹಾಸ್ವಾಮೀಜಿ ಅವರ
ಸಾನ್ನಿಧ್ಯದಲ್ಲಿ ಜರುಗಲಿರುವ ಈ ಕಾರ್ಯಕ್ರಮದಲ್ಲಿ ಬೆಳಗಾವಿ ನಾಗನೂರು ರುದ್ರಾಕ್ಷಿ
ಮಠದ ಪೀಠಾಧೀಶರಾದ ಡಾ.ಅಲ್ಲಮಪ್ರಭು ಮಹಾಸ್ವಾಮೀಜಿ ನೇತೃತ್ವದಲ್ಲಿ ಜರುಗಲಿರುವ ಈ
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಬೆಳಗಾವಿಯ ಕ್ರೈಮ್ ಬ್ರ್ಯಾಂಚ್ ಪೊಲೀಸ್ ಉಪ
ಆಯುಕ್ತ ನಾರಾಯಣ ಬರಮನಿ ಮತ್ತು ಪದವಿಪೂರ್ವ ಶಿಕ್ಷಣ ವಿಭಾಗದ ಬೆಳಗಾವಿ
ಉಪನಿರ್ದೇಶಕ ನಾಗರಾಜ ವಿ. ಆಗಮಿಸಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು
ಶ್ರೀ ಸಿದ್ಧರಾಮೇಶ್ವರ ಎಜುಕೇಶನ್ ಟ್ರಸ್ಟ್ ನ ಕಾರ್ಯದರ್ಶಿ ಕೆ.ಬಿ. ಹಿರೇಮಠ
ವಹಿಸಲಿದ್ದಾರೆ.


Leave A Reply

Your email address will not be published.