ಜತ್ :
ಸಾಂಗ್ಲಿ ಜಿಲ್ಲೆಯ ಜತ್ ತಾಲೂಕಿನ ಸಿದ್ದನಾಥ ಗ್ರಾಮದ ಕನ್ನಡ ಭಾಷಿಕರು ಕನ್ನಡ ಸಂಘಟನೆಗಳ ನೇತೃತ್ವದಲ್ಲಿ ಸೋಮವಾರ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಭಾರಿ ಪ್ರತಿಭಟನೆ ನಡೆಸಿದರು. ಇದೇ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ದಿಕ್ಕಾರವಿರಲಿ, ಕರ್ನಾಟಕಕ್ಕೆ ಜಯವಾಗಲಿ ಎಂಬ ಜಯಘೋಷ ಮೊಳಗಿಸಿದರು.
ಮಹಾರಾಷ್ಟ್ರ ರಾಜ್ಯದ ಕನ್ನಡ ಭಾಷಿಕರು ಇರುವ ಪ್ರದೇಶದಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಸಾರಿಗೆ, ನೀರಾವರಿ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮಹಾರಾಷ್ಟ್ರ ನಮ್ಮ ಗ್ರಾಮಗಳನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಸೌಲಭ್ಯ ನೀಡುವುದಾಗಿ ಹೇಳಿ ವಂಚಿಸುತ್ತಿದೆ ಎಂದು ದೂರಿದರು.
ಈ ಹಿನ್ನೆಲೆಯಲ್ಲಿ ನಾವು ಮಹಾರಾಷ್ಟ್ರ ತೊರೆದು ಕರ್ನಾಟಕ ಸೇರ್ಪಡೆಗೆ ಮುಂದಾಗಿರುವುದಾಗಿ ತಿಳಿಸಿದರು.