ಬೆಂಗಳೂರು :
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ಮತ್ತು ಗಡಿನಾಡು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಸಿ.ಸೋಮಶೇಖರ ಅವರನ್ನು ನೇಮಕ ಮಾಡಲಾಗಿದೆ.
ಸೋಮಶೇಖರ ಅವರು ಈ ಮೊದಲು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಕಾರ್ಯಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಸಾಹಿತ್ಯ ಕ್ಷೇತ್ರದಲ್ಲಿ ಅವರ ಅನುಪಮ ಸೇವೆ ಪರಿಗಣಿಸಿ ಅವರನ್ನು ನೇಮಕ ಮಾಡಲಾಗಿದೆ. ನ.23 ರಂದು ಅವರು ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪರಮೇಶ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ