ಮುಂಬೈ :
ಭಾರತೀಯ ಕ್ರಿಕೆಟ್ ತಂಡದ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾಗಿರುವ ಸೂರ್ಯಕುಮಾರ್ ಯಾದವ್ ಅಪರೂಪದ ದಾಖಲೆ ಬರೆದಿದ್ದಾರೆ.
ಟಿ 20 ಯಲ್ಲಿ 900 ರೇಟಿಂಗ್ ಅಂಕಗಳನ್ನು ಗಳಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಪಾತ್ರರಾಗಿದ್ದಾರೆ . ಸೂರ್ಯ ಪ್ರಸ್ತುತ 908 ರೇಟಿಂಗ್ ಪಾಯಿಂಟ್ಗಳೊಂದಿಗೆ ಐಸಿಸಿ ನಂ .1 ಬ್ಯಾಟ್ಸ್ಮನ್ ಆಗಿದ್ದಾರೆ.
ಪಾಕಿಸ್ತಾನದ ಬ್ಯಾಟ್ಸ್ಮನ್ ಮೊಹಮ್ಮದ್ ರಿಜ್ವಾನ್ 836 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ . 631 ಅಂಕಗಳೊಂದಿಗೆ ವಿರಾಟ್ ಕೊಹ್ಲಿ 13 ನೇ ಸ್ಥಾನದಲ್ಲಿದ್ದಾರೆ . ಅಂದಹಾಗೆ ಸೂರ್ಯಕುಮಾರ್ ಯಾದವ ಅವರು ಕರುನಾಡ ಮೂಲದ ಯುವತಿಯನ್ನು ವರಿಸಿದ್ದಾರೆ.
ಭಾರತದ ಪರವಾಗಿ ಆಡುತ್ತಿರುವ ಸೂರ್ಯ ಕುಮಾರ್ ಯಾದವ್ ಅವರು ಟಿ20 ಕ್ರಿಕೆಟ್ ನಲ್ಲಿ ಅತ್ಯಂತ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವುದು ವಿಶೇಷವಾಗಿದೆ. ಅವರ ಬ್ಯಾಟಿಂಗ್ ವೈಭವ ಜಗತ್ತಿನ ಶ್ರೇಷ್ಠ ಆಟಗಾರರ ಗಮನ ಸೆಳೆದಿದೆ.

 
             
         
         
        
 
  
        
 
    