This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Local News

ಶೀಘ್ರವೇ ಕಮಲ ಮುಡಿಗೆ ಮಾಜಿ ಸಂಸದ Soon Kamala Mudge is a former MP


 

ಬೆಂಗಳೂರು:
ಸಂಸದೆ ಸುಮಲತಾ ಬಿಜೆಪಿಗೆ ಬೆಂಬಲ ಘೋಷಣೆ ಬೆನ್ನಲ್ಲೇ ಈಗ ಮಾಜಿ ಸಂಸದ ಎಲ್​.ಆರ್. ಶಿವರಾಮೇಗೌಡ ಬಿಜೆಪಿಗೆ ಬೆಂಬಲ ಘೋಷಿಸಿದ್ದಾರೆ.
ಬೆಂಗಳೂರಿನ ನಾಗಮಂಗಲ ನಿವಾಸಿಗಳ ಸಮಾವೇಶದಲ್ಲಿ ಸಚಿವ ಮುನಿರತ್ನ ಅವರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು, ನಾಗಮಂಗಲಕ್ಕೆ ಬಿಜೆಪಿ ಅತ್ಯಗತ್ಯವಾಗಿ ಬೇಕು. ಬಿಜೆಪಿ ರಾಜ್ಯಕ್ಕೆ, ರಾಷ್ಟ್ರಕ್ಕೆ ಬೇಕು. ಯಡಿಯೂರಪ್ಪ ಮುಖ್ಯಮಂತ್ರಿಗಳಿದ್ದಾಗ ಇದ್ದಾಗ ನನಗೆ ಲೋಕಸಭೆಗೆ ಬಿ ಫಾರಂ ಕೊಟ್ಟಿದ್ದರು. 1.67 ಮತ ಪಡೆದು ಆಗ ನಾನು ಸೋತೆ. ಬಳಿಕ ‌ನಾನು ಜೆಡಿಎಸ್​ಗೆ ಬಂದೆ. ಜೆಡಿಎಸ್ ನಲ್ಲಿ ನನ್ನನ್ನು ಬಳಸಿಕೊಂಡರು ಎಂದು ಶಿವರಾಮೇಗೌಡ ಅಸಮಾಧಾನ ಹೊರ ಹಾಕಿದ್ದಾರೆ.
ಮಂಡ್ಯದಲ್ಲಿ ಬಿಜೆಪಿ ಬೇರೂರಬೇಕು. ಮಂಡ್ಯದಲ್ಲಿ ಕಮಲ ಅರಳಿಸಬೇಕು. ನನ್ನನ್ನೂ ಬಿಜೆಪಿಯಿಂದ ಆಹ್ವಾನಿಸಲಾಗಿದೆ. ನಾನು ಶೀಘ್ರವೇ ಬಿಜೆಪಿ ಸೇರುತ್ತೇನೆ ಎಂದು ಶಿವರಾಮೇಗೌಡ ಘೋಷಿಸಿದರು.
ಸುಮಲತಾ ಅವರೂ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ. ಮಂಡ್ಯದಲ್ಲಿ ನಾಗಮಂಗಲ ಸೇರಿ ಏಳೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸ್ತೇವೆ. ನಾನು ಸಿದ್ದರಾಮಯ್ಯ, ಕುಮಾರಸ್ವಾಮಿ ಆಳ್ವಿಕೆ ನೋಡಿದವನು. ನಾಗಮಂಗಲದ ಜನರ ಮತ ಕೇಳುವ ಹಕ್ಕು ಚೆಲುವರಾಯಸ್ವಾಮಿ, ಸುರೇಶ್ ಗೌಡರಿಗೆ ಇಲ್ಲ ಎಂದರು.
ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ ಅವರು ಮಾಜಿ ಸಂಸದ ಜಿ.ಮಾದೇಗೌಡ ಅವರ ಬಗ್ಗೆ ಲಘುವಾಗಿ ಮಾತನಾಡಿ ಜೆಡಿಎಸ್‌ನಿಂದ ಉಚ್ಚಾಟನೆಗೊಂಡಿದ್ದರು. ಉಚ್ಚಾಟನೆಗೊಂಡ ಒಂದು ವರ್ಷದ ಬಳಿಕ ಬಿಜೆಪಿ ಸೇರುವ ಇಂಗಿತ ವ್ಯಕ್ತಪಡಿಸಿದ್ದಾರೆ.


Jana Jeevala
the authorJana Jeevala

Leave a Reply