ಬೆಳಗಾವಿ :
ಬೆಳಗಾವಿಯ ಕರ್ನಾಟಕ ಲಾ ಸೊಸೈಟಿಯ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯವು ‘ಉದ್ಯಮಶೀಲತೆ ಅಭಿವೃದ್ಧಿ’ ಕುರಿತು ವಿಶೇಷ ಉಪನ್ಯಾಸವನ್ನು ಆಯೋಜಿಸಿತ್ತು.
ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮ ನಿಯಮಿತದ ಶಾಖಾ ವ್ಯವಸ್ಥಾಪಕ ಆರ್.ಜೆ.ಎಸ್.ವಿ ರಾಮರಾವ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ, ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ಎಂಎಸ್ಎಂಇಗಳ ಪಾತ್ರದ ಕುರಿತು ವಿವರಿಸಿದರು.
ಅವರು NSIC ಸ್ಥಾಪನೆ ಮತ್ತು ಕಾರ್ಯನಿರ್ವಹಣೆಯ ಬಗ್ಗೆ ವಿವರಿಸಿದರು ಮತ್ತು NSIC ಯ ಉದ್ದೇಶಗಳ ಬಗ್ಗೆಯೂ ತಿಳಿಸಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಡಾ.ಎ.ಎಂ.ಹವಾಲ್ದಾರ, ದೇಶದ ಜಿಡಿಪಿಯನ್ನು ಹೆಚ್ಚಿಸುವಲ್ಲಿ ಎಂಎಸ್ಎಂಇಗಳ ಕೊಡುಗೆಯನ್ನು ತಿಳಿಸಿದರು.
ಕಾಲೇಜಿನ ಐಕ್ಯೂಎಸಿ ಸಹಯೋಗದಲ್ಲಿ ಪ್ರೊ.ಪ್ರೀತಂ ರೇವಣಕರ್ ಕಾರ್ಯಕ್ರಮ ಆಯೋಜಿಸಿದ್ದರು. ಸುನಿಧಿ ಜೋಶಿ ವಂದಿಸಿದರು.
ಈ ಸಂದರ್ಭದಲ್ಲಿ ಎಲ್ಲಾ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.