ಬೆಳಗಾವಿ :
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ ವತಿಯಿಂದ ಅ. ೮ ರಂದು ಬೆಳಗ್ಗೆ ೧೧.೦೦
ಗಂಟೆಗೆ ನಗರದ ಗಾಂಧಿಭವನದಲ್ಲಿ ಶ್ರೀ ವೀರಭದ್ರೇಶ್ವರ ಜಯಂತಿ ಉತ್ಸವ
ಹಮ್ಮಿಕೊಳ್ಳಲಾಗಿದೆ.ಶ್ರೀಶೈಲ ಜಗದ್ಗುರು ಡಾ.ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ
ಭಗವತ್ಪಾದರು, ಕಾಶಿ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ
ಜಗದ್ಗುರು ಸಿದ್ದಲಿಂಗ ರಾಜದೇಶಿಕೇಂದ್ರ ಭಗವತ್ಪಾದರು, ನಿಡಸೋಸಿ ದುರದುಂಡೀಶ್ವರ
ಸಿದ್ಧಸಂಸ್ಥಾನ ಮಠದ ಪೀಠಾಧಿಪತಿ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಮತ್ತು
ಹುಬ್ಬಳ್ಳಿ ಮೂರು ಸಾವಿರ ಮಠದ ಜಗದ್ಗುರು, ಶಿರಹಟ್ಟಿ ಪಕೀರೇಶ್ವರ ದಿಂಗಾಲೇಶ್ವರ
ಜಗದ್ಗುರುಗಳು ಸಾನ್ನಿಧ್ಯ ವಹಿಸುವರು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ
ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.
ಬೆಳಗಾವಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರಿಂದು ೧೦೦ಕ್ಕೂ ಅಧಿಕ
ಮಠಾಧೀಶರ ನೇತೃತ್ವದಲ್ಲಿ ನಡೆಯುವ ಈ ಜಯಂತಿ ಕಾರ್ಯಕ್ರಮವನ್ನು ಕೆಎಲ್ಇ ಸಂಸ್ಥೆಯ
ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಉದ್ಘಾಟಿಸುವರು. ಮಾಜಿ ಸಚಿವ, ವಿಧಾನ ಪರಿಷತ್
ಸದಸ್ಯ ಪ್ರಕಾಶ ಹುಕ್ಕೇರಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಮಹಿಳಾ
ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಭಾಗವಹಿಸುವರು.
ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ ಅಶೋಕ ಪಟ್ಟಣ, ಸಂಸದರಾದ ಅಣ್ಣಾಸಾಹೇಬ ಜೊಲ್ಲೆ,
ಮಂಗಳಾ ಅಂಗಡಿ, ಈರಣ್ಣ ಕಡಾಡಿ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಳ್ಳುವರು.
ವೀರಭದ್ರೇಶ್ವರ ಜಯಂತಿ ಕಾರ್ಯಕ್ರಮದಲ್ಲಿ ಸುಮಾರು ೫ ಸಾವಿರ ಜನರು ಪಾಲ್ಗೊಳ್ಳುವ
ನಿರೀಕ್ಷೆಯಿದೆ.
ಜಯಂತಿ ಕಾರ್ಯಕ್ರಮಕ್ಕೂ ಮುನ್ನ ಬೆಳಗ್ಗೆ ೧೦ ಗಂಟೆಗೆ ವೀರರಾಣಿ ಕಿತ್ತೂರು ರಾಣಿ
ಚನ್ನಮ್ಮ ವೃತ್ತದಿಂದ ಶ್ರೀ ವೀರಭದ್ರೇಶ್ವರ ಮೂರ್ತಿಯ ಭವ್ಯ ಮೆರವಣಿಗೆ ಮುಖಾಂತರ
ಗಾಂಧಿಭವನಕ್ಕೆ ತೆರಳಲಿದೆ. ಈ ಮೆರವಣಿಗೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕುಂಭ
ಹೊತ್ತ ಸುಮಂಗಲೆಯರು, ಪುರೋಹಿತರು, ಅರ್ಚಕರು, ಪುರವಂತರು/ವೀರಗಾಸೆ ಕಲಾವಿದರು
ಒಟ್ಟಿಗೆ ಪಾಲ್ಗೊಳ್ಳುವರು. ವೀರಭದ್ರೇಶ್ವರ ಜಯಂತಿ ಉತ್ಸವವನ್ನು ಯಶಸ್ವಿಯಾಗಿಸುವ
ಹಿನ್ನೆಲೆಯಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ.
ಈ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅಖಂಡ ವೀರಶೈವ ಲಿಂಗಾಯತ ಸಮುದಾಯಕ್ಕೆ ಕೇಂದ್ರದ
ಓಬಿಸಿ ಮೀಸಲಾತಿಗಾಗಿ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಪಾರಸು ಮಾಡುವಂತೆ
ಮಾಡಲಾಗುವುದು ಎಂದು ಕಿತ್ತೂರು ಕರ್ನಾಟಕ ಪ್ರದೇಶ ಅಧ್ಯಕ್ಷರಾದ ಉಮೇಶ್ ಬಾಳಿ ಅವರು
ತಿಳಿಸಿದರು,ಈ ಸಂಧರ್ಬದಲ್ಲಿ ಶ್ರೀ ಗುರುಸಿದ್ಧ ಮಹಾಸ್ವಾಮಿಗಳು ಕಾರಂಜಿಮಠ ಬೆಳಗಾವಿ,
ಕಾರ್ಯಕ್ರಮದ ಉಸ್ತುವಾರಿ ವಹಿಸಿರುವ ಮಾಜಿ ಶಾಸಕ ವಿ.ಆಯ್.ಪಾಟೀಲ,ಗೋಕಾಕ ಮುಖಂಡ ಶ್ರೀ
ಅಶೋಕ ಪೂಜಾರಿ,ರಾಷ್ಟ್ರೀಯ ಅಧ್ಯಕ್ಷ ಪ್ರದೀಪ ಕಂಕಣವಾಡಿ ,ವೈದ್ಯಕೀಯ ಘಟಕ ಸುಭಾಶ
ಪಾಟೀಲ, ಉಪಸ್ಥಿತರಿದ್ದರು.