ಬೆಳಗಾವಿ/ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಸರಕಾರಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೇ ಮೊದಲ ರ್ಯಾಂಕ್ ಪಡೆದಿದ್ದಾಳೆ.
625/625 ಅಂಕ ಪಡೆದು ಹಿಂದುಳಿದ ವರ್ಗಗಳ ಇಲಾಖೆಗೆ ಗೌರವ ತಂದಿದ್ದಾಳೆ.
ವಿದ್ಯಾರ್ಥಿನಿಯ ಸಾಧನೆಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ. ಎಂ. ಜಾನಕಿ ಮತ್ತು ಜಿಪಂ. ಸಿಇಓ ಶಶಿಧರ ಕುರೇರ ಅವರು ಅಭಿನಂದನೆ ಸಲ್ಲಿಸಿದ್ದಾರೆ. ಮುಂದೆ ದೇಶದ ಅತ್ಯುನ್ನತ ಪರೀಕ್ಷೆ ಯುಪಿಎಸ್ ಸಿ ಪಾಸು ಮಾಡುವ ಮನದಿಂಗಿತ ಅಂಕಿತಾ ಈ ಸಂದರ್ಭ ವ್ಯಕ್ತಪಡಿಸಿದ್ದಾಳೆ. ತಂದೆ ಕೃಷಿಕ, ತಾಯಿ ಗೃಹಿಣಿ. ಮಗಳ ವಿದ್ಯಾಭ್ಯಾಸಕ್ಕೆ ಸರಕಾರದ ನೆರವು ಈಗ ಅವಳ ಪ್ರತಿಭಾ ಅನಾವರಣಕ್ಕೆ ಕಾರಣವಾಗಿದೆ.
IAS ಪರೀಕ್ಷೆ ಪಾಸು ಮಾಡುವ ದಿಸೆಯಲ್ಲಿ ಅವಳಿಗೆ ಸಹಾಯ ಸಹಕಾರ ಮಾಡಲಾಗುವುದು, ಅವಳ ಸಾಧನೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು, ಅವಳು ಕಲಿತ ವಸತಿ ಶಾಲೆಯ ಶಿಕ್ಷಕರು ಸಿಬ್ಬಂಧಿಗೂ ಸತ್ಕರಿಸಲಾಗುವುದು ಎಂದು ಸಿಇಓ ಶಶಿಧರ ಕುರೇರ ಜನ ಜೀವಾಳದೊಂದಿಗೆ ಸಂತಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ 8,59,967 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಮೂಲಕ 2023-24 ನೇ ಸಾಲಿನ ಶೇಕಡಾವಾರು ಫಲಿತಾಂಶ 70.40ಕ್ಕೆ ಕುಸಿತವಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಶೇ.10 ಪರ್ಸೆಂಟ್ ಕುಸಿತವಾಗಿದೆ. ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.
ಪ್ರಸ್ತುತ 2023-24ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ karresults.nic.in ಅಥವಾ kseab.karnataka.gov.in ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ರಾಜ್ಯಾದ್ಯಂತ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆ ಬರೆದಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿ ವತಿಯಿಂದ ಮಾರ್ಚ್ 25 ಮತ್ತು ಏಪ್ರಿಲ್ 6ರ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಫಲಿತಾಂಶ ಹೊರ ಬಿದ್ದಿದೆ. ಈ ಪೈಕಿ ಬಾಗಲಕೋಟೆಯ ಅಂಕಿತಾ ರಾಜ್ಯಕ್ಕೆ ಟಾಪರ್. 625ಕ್ಕೆ 625 ಅಂಕ ಪಡೆದುಕೊಂಡಿದ್ದಾಳೆ.
ಲಿಂಗವಾರು ಒಟ್ಟಾರೆ ಫಲಿತಾಂಶ:
ಬಾಲಕರು: 2,87,416 (65.90%)
ಬಾಲಕಿಯರು; 3,43,788 (81.11%)
SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ ಸಾಧಿಸಿದ್ದಾರೆ.
ರಾಜ್ಯದಲ್ಲಿ ಶೇಕಡಾವಾರು ಪ್ರಥಮ ಸ್ಥಾನ ಪಡೆದ ಜಿಲ್ಲೆ :
1) ಉಡುಪಿ – ಪ್ರಥಮ ಸ್ಥಾನ (94%)
2) ದಕ್ಷಿಣ ಕನ್ನಡ – ದ್ವಿತೀಯ ಸ್ಥಾನ(92.12%)
3) ಶಿವಮೊಗ್ಗ- ತೃತೀಯ ಸ್ಥಾನ (88.67%)
ರಾಜ್ಯದಲ್ಲಿ ಶೇಕಡಾವಾರು ಕೊನೆ ಸ್ಥಾನ ಪಡೆದ ಜಿಲ್ಲೆ ಯಾದಗಿರಿ ಶೇ.50.59 ಫಲಿತಾಂಶ ಪಡೆದಿದೆ.
ಎಸ್ಎಸ್ಎಲ್ಸಿ ಪರೀಕ್ಷೆ, ಜಿಲ್ಲೆಗಳ ಶೇಕಡಾವಾರು ಫಲಿತಾಂಶ
ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ 94% ಫಲಿತಾಂಶ, ದಕ್ಷಿಣ ಕನ್ನಡ 92.12%, ಶಿವಮೊಗ್ಗ 88.67%, ಕೊಡಗು 88.67%, ಉತ್ತರ ಕನ್ನಡ 86.54%, ಹಾಸನ 86.28%, ಮೈಸೂರು 85.5%, ಶಿರಸಿ 84.64%, ಬೆಂಗಳೂರು ಗ್ರಾ. 83.67%, ಚಿಕ್ಕಮಗಳೂರು 83.39%, ವಿಜಯಪುರ 79.82%, ಬೆಂಗಳೂರು ದಕ್ಷಿಣ 79%, ಬಾಗಲಕೋಟೆ 77.92%, ಬೆಂಗಳೂರು ಉತ್ತರ, 77.09%, ಹಾವೇರಿ 75.85%, ತುಮಕೂರು 75.16%, ಗದಗ 74.76%, ಚಿಕ್ಕಬಳ್ಳಾಪುರ 73.61%, ಮಂಡ್ಯ 73.59% ಕೋಲಾರ 73.57%, ಚಿತ್ರದುರ್ಗ 72.85%, ಧಾರವಾಡ 72.67%, ದಾವಣಗೆರೆ 72.49%, ಚಾಮರಾಜನಗರ 71.59%, ಚಿಕ್ಕೋಡಿ 69.82%, ರಾಮನಗರ 69.53%, ವಿಜಯನಗರ 65.61%, ಬಳ್ಳಾರಿ 64.99%, ಬೆಳಗಾವಿ 64.93%, ಮಧುಗಿರಿ 62.44%, ರಾಯಚೂರು 61.2%, ಕೊಪ್ಪಳ 61.16%, ಬೀದರ್ 57.52%, ಕಲಬುರಗಿ 53.04%, SSLC ಪರೀಕ್ಷೆಯಲ್ಲಿ ಯಾದಗಿರಿ ಜಿಲ್ಲೆ 50.59% ಫಲಿತಾಂಶ ಬಂದಿದೆ.