ಬೆಂಗಳೂರು: ಜೂನ್ 7ರಿಂದ 14ರವರೆಗೆ ಎಸ್ಎಸ್ಎಲ್ಸಿ ಎರಡನೇ ಪರೀಕ್ಷೆ ನಡೆಯಲಿದ್ದು, ನೋಂದಣಿ ದಿನಾಂಕವನ್ನು ಮೇ 19ರವರೆಗೆ ವಿಸ್ತರಿಸಲಾಗಿದೆ.
ಮೊದಲು ಮೇ 16 ಕೊನೆಯ ದಿನವಾಗಿತ್ತು. ಇದುವರೆಗೂ ಸುಮಾರು 2 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಎಸ್ಎಸ್ಎಲ್ಸಿ ಅನುತ್ತೀರ್ಣರಾದ ಹಾಗೂ ಕಡಿಮೆ ಫಲಿತಾಂಶ ಪಡೆದ ವಿದ್ಯಾರ್ಥಿಗಳಿಗೆ ಫಲಿತಾಂಶ ವೃದ್ಧಿಸಿಕೊಳ್ಳಲು ಎರಡನೇ ಮತ್ತು ಮೂರನೇ ಪರೀಕ್ಷೆ ನಡೆಸಲಾಗುತ್ತಿದೆ.
ಎಸ್ಎಸ್ಎಲ್ಸಿ ಪರೀಕ್ಷೆ-2 ವೇಳಾಪಟ್ಟಿ:
ಜೂನ್ 7-ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್ (ಎನ್ಸಿಇಆರ್ಟಿ), ಸಂಸ್ಕೃತ, 8-ತೃತೀಯ ಭಾಷೆಗಳಾದ ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಎನ್ಎಸ್ಕ್ಯೂಎಫ್ ವಿಷಯಗಳು, 10-ಗಣಿತ, 11-ಅರ್ಥಶಾಸ್ತ್ರ, ಎಂಜನಿಯರಿಂಗ್ ವಿಷಯಗಳು, 12-ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ, ಕರ್ನಾಟಕ ಸಂಗೀತ, 13-ದ್ವಿತೀಯ ಭಾಷೆಗಳಾದ ಇಂಗ್ಲಿಷ್, ಕನ್ನಡ, 14-ಸಮಾಜ ವಿಜ್ಞಾನ.