ಬೆಂಗಳೂರು: ಹಬ್ಬದ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದೆ. ಇದೇ ವರ್ಷದಿಂದ ಜಾರಿಯಾಗುವಂತೆ, ಪಾಸ್ ಆಗಲು ಬೇಕಾದ ಕನಿಷ್ಠ ಅಂಕಗಳನ್ನು ಕಡಿಮೆ ಮಾಡಲಾಗಿದೆ.
ಎಸ್ಎಸ್ಎಲ್ಸಿಯಲ್ಲಿ ಇನ್ಮುಂದೆ ಪಾಸ್ ಆಗಲು 33% ಅಂಕ ಪಡೆದರೆ ಸಾಕು ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾಗಲು 30% ಅಂಕ ಪಡೆದರೆ ತೇರ್ಗಡೆ ಆಗಲಿದ್ದಾರೆ. ಈ ವರೆಗೆ ಎಸ್ಎಸ್ಎಲ್ಸಿ ಯಲ್ಲಿ ಪಾಸ್ ಆಗಲು ಪ್ರತೀ ವಿಷಯದಲ್ಲಿ 35 ಅಂಕ ಪಡೆಯಬೇಕಿತ್ತು, ಈಗ ಅದನ್ನು 33 ಕ್ಕೆ ಇಳಿಕೆ ಮಾಡಲಾಗುತ್ತದೆ.
ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಸುದ್ದಿಗೋಷ್ಠಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಇನ್ನು ಮುಂದೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625 ಕ್ಕೆ 206 ಅಂಕ ಗಳಿಸಿದರೆ ವಿದ್ಯಾರ್ಥಿಗಳು ತೇರ್ಗಡೆ ಆಗಲಿದ್ದಾರೆ. ಪ್ರತಿ ವಿಷಯದಲ್ಲಿಯೂ ಆಂತರಿಕ ಮತ್ತು ಬಾಹ್ಯ ಪರೀಕ್ಷೆಗಳಲ್ಲಿ ಪಡೆದ ಒಟ್ಟು ಅಂಕಗಳು ಸೇರಿ ಕನಿಷ್ಠ 33 ಅಂಕಗಳು ಇರಬೇಕು. 625ಕ್ಕೆ 206 ಅಂಕ ಪಡೆದರೆ ಅಥವಾ ಆಯಾ ವಿಷಯದ ಒಟ್ಟು ಅಂಕಗಳಲ್ಲಿ 30 ಅಂಕ ಪಡೆದಿರಬೇಕು. ಆಂತರಿಕ ಮತ್ತು ಬಾಹ್ಯ ಅಂಕ ಸೇರಿ ಒಟ್ಟು ಶೇ. 33 ರಷ್ಟು ಅಂಕ ಪಡೆದ ವಿದ್ಯಾರ್ಥಿಯನ್ನು ಉತ್ತೀರ್ಣ ಎಂದು ಘೋಷಿಸಲಾಗುತ್ತದೆ ತಿಳಿಸಿದರು. ಎಸ್ಎಸ್ಎಲ್ಸಿ (SSLC): ಪ್ರಸ್ತುತ 625 ಅಂಕಗಳಿಗೆ ಕನಿಷ್ಟ ಶೇ. 35ರಷ್ಟು (219 ಅಂಕಗಳು) ಗಳಿಸುವುದು ಕಡ್ಡಾಯವಿತ್ತು.
ಹಾಗೆಯೇ ಪಿಯುಸಿಯಲ್ಲಿ, 600 ಕ್ಕೆ 198 ಅಂಕ ಪಡೆದರೆ ಪಾಸ್ ಆಗಲಿದ್ದು, ಪ್ರತಿ ವಿಷಯದಲ್ಲಿ 30 ಅಂಕ ಪಡೆದರೆ ತೇರ್ಗಡೆ ಆಗಲಿದ್ದಾರೆ ಎಂದು ಹೇಳಿದ್ದಾರೆ. ಈ ಹಿಂದೆ 35 ಅಂಕ ಪಡೆಯಬೇಕಿತ್ತು.
ಈ ಹೊಸ ನಿಯಮ ಈ ವರ್ಷದಿಂದಲೇ ಸರ್ಕಾರಿ ಹಾಗೂ ಖಾಸಗಿ ಸೇರಿದಂತೆ ಎಲ್ಲ ಶಾಲೆಗಳಿಗೆ ಅನ್ವಯವಾಗಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಅವರು, ಈ ಮಹತ್ವದ ಬದಲಾವಣೆಯನ್ನು ಪರೀಕ್ಷಾ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಮಾಡಲಾಗಿದೆ ಎಂದು ಸಚಿವರು ತಿಳಿಸಿದರು.
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ 3 ಪರೀಕ್ಷೆ ವ್ಯವಸ್ಥೆ ಜಾರಿ ಮಾಡಲಾಗಿದೆ. ಪಾರದರ್ಶಕತೆ ತರುವ ಉದ್ದೇಶದಿಂದ ವೆಬ್ ಕ್ಯಾಸ್ಟ್ ಮಾಡಲಾಗಿದೆ. ಪರೀಕ್ಷೆಗಳು ಉತ್ತಮವಾಗಿ ನಡೆದವು. ವೆಬ್ ಕ್ಯಾಸ್ಟಿಂಗ್ ನಿಂದ ಕಡಿಮೆ ಅಂಕ ಬಂದಾಗ ಶಿಕ್ಷಕರು ಜವಾಬ್ದಾರಿ ತಗೊಂಡು ಕೆಲಸ ಮಾಡಿದ್ದಾರೆ. ಆದ್ದರಿಂದ ಉತ್ತಮ ಫಲಿತಾಂಶ ಬಂದಿದೆ ಎಂದು ಎಂದು ತಿಳಿಸಿದರು.
2025-26ನೇ ಸಾಲಿನಿಂದ ಈ ನಿಯಮ ಜಾರಿಗೆ ಬರಲಿದೆ. ಈ ವರ್ಷ ಹಾಜರಾಗೋ ಎಲ್ಲಾ ವಿದ್ಯಾರ್ಥಿಗಳು, ರಿಪೀಟರ್ಸ್, ಖಾಸಗಿ ಅಭ್ಯರ್ಥಿಗಳಿಗೂ ಈ ನಿಯಮ ಜಾರಿಯಾಗಲಿದೆ