ಬೆಳಗಾವಿ: ಎಸ್ಎಸ್ಎಲ್ಸಿ ಪರೀಕ್ಷಾ ಭಯದಿಂದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ವಿಶ್ವೇಶ್ವರಯ್ಯ ನಗರದ ಫಾರೆಸ್ಟ್ ಕಾಲೋನಿಯಲ್ಲಿ ಮಂಗಳವಾರ ನಡೆದಿದೆ. ದೀಪಿಕಾ ರಾಜೇಂದ್ರ ಬಡಿಗೇರ (16) ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿನಿ. ಮಂಗಳವಾರ ಎಸ್ಎಸ್ಎಲ್ಸಿ 2ನೇ ವಿಷಯದ ಪರೀಕ್ಷೆಯನ್ನು ಬರೆದು ಮನೆಗೆ ಬಂದಿದ್ದಾಳೆ. ಫೇಲಾಗುವ ಭಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಎಪಿಎಂಸಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.