ಬೆಳಗಾವಿ : ಬೆಳಗಾವಿಯಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿದೆ.
ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಮುಂಬೈಗೆ ಹೊರಟಿದ್ದ ಸ್ಟಾರ್ ಏರ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಮತ್ತೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿಯೇ ತುರ್ತು ಭೂಸ್ಪರ್ಶ ಮಾಡಲಾಗಿದೆ.
ಬೆಳಗಾವಿ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆಗಿದ್ದ ವಿಮಾನ ಹಾರಾಡುತ್ತಿದ್ದಂತೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಎಚ್ಚೆತ್ತ ಪೈಲಟ್ 15 ನಿಮಿಷ ಹಾರಾಟ ನಡೆಸಿ ಮತ್ತೆ ಬೆಳಗಾವಿ ವಿಮಾನ ನಿಲ್ದಾಣದಲ್ಲಿಯೇ ತುರ್ತು ಭೂಸ್ಪರ್ಶ ಮಾಡಿದ್ದಾರೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಪ್ರಯಾಣಿಕರು, ವಿಮಾನ ಸಿಬ್ಬಂದಿಗಳು ಸುರಕ್ಷಿತರಾಗಿದ್ದಾರೆ ಎಂದು ತಿಳಿದುಬಂದಿದೆ.