ಬೆಳಗಾವಿ : ಹಿರಿಯ ನಾಗರಿಕರ ದಿನಾಚರಣೆ ೨೦೨೩ ರ ಹಿನ್ನೆಲೆ ಹಿರಿಯ ನಾಗರಿಕರ ವೈಯಕ್ತಿಕ ಹಾಗೂ ಸಂಸ್ಥೆಯ ರಾಜ್ಯ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಳಗಾವಿ ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ( ಶಿಕ್ಷಣ, ಸಾಹಿತ್ಯ, ಕಲೆ, ಕಾನೂನು, ಪ್ರತಿಭೆ, ಕ್ರೀಡೆ, ಸಮಾಜ ಸೇವೆ) ಗಣನೀಯ ಸೇವೆ ಸಲ್ಲಿಸಿರುವ / ಸಲ್ಲಿಸುತ್ತಿರುವ (೬೦ ವರ್ಷ ಮೇಲ್ಪಟ್ಟ ) ಹಿರಿಯ ನಾಗರಿಕರು ಹಾಗೂ ಸ್ವಯಂ-ಸಂಸ್ಥೆಯವರು ನಿಗದಿತ ಅರ್ಜಿ ನಮೂನೆಯಲ್ಲಿ ಪೂರ್ಣ ವಿವರಗಳನ್ನೊಳಗೊಂಡು ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಆಗಸ್ಟ್.೧೫ ೨೦೨೩ರ ಒಳಗಾಗಿ ಈ ಕಚೇರಿಗೆ ಸಲ್ಲಿಸಬಹುದು.
ನಿಗದಿಪಡಿಸಿರುವ ಅಂತಿಮ ದಿನಾಂಕವನ್ನು ಹೊರತಾಗಿ ತಡವಾಗಿ ಸ್ವೀಕೃತವಾಗುವಂತಹ ಪ್ರಸ್ತಾವನೆಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿ ಹಾಗೂ ಅರ್ಜಿ ನಮೂನೆಗಾಗಿ ದೂರವಾಣಿ ಸಂಖ್ಯೆ: ೦೮೩೧-೨೪೭೬೦೯ ಗೆ ಅಥವಾ ಆಯಾ ತಾಲೂಕು ಪಂಚಾಯತಿ ಕಛೇರಿಯಲ್ಲಿರುವ ಎಂ.ಆರ್.ಡಬ್ಲು ಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.