ಬೆಳಗಾವಿ: ಮಹಾರಾಷ್ಟ್ರದ ಇಚಲಕರಂಜಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ರಾಜ್ಯ ರಸ್ತೆ ಸಾರಿಗೆ ಬಸ್ ಇಚಲಕರಂಜಿಯಿಂದ ಚಿಕ್ಕೋಡಿಗೆ ತೆರಳುತ್ತಿತ್ತು. ಹೋಳಿ ಬಣ್ಣ ಎರಚುವ ವೇಳೆ ಬಸ್ ಹಾಗೂ ಇತರ ವಾಹನಗಳಿಗೆ ಮಸಿ ಎರಚಿ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟ ಪ್ರಕರಣಕ್ಕೂ ಮತ್ತು ಭಾಷಾ ವಿಷಯಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೇದ ತಿಳಿಸಿದ್ದಾರೆ.
ಇಚಲಕರಂಜಿಯಲ್ಲಿ ನಡೆದ ಘಟನೆಯಲ್ಲಿ ಕಿಡಿಗೇಡಿಗಳು ಒಂದು ಕರ್ನಾಟಕ ಸಾರಿಗೆ ಬಸ್ ಮತ್ತು ಮಹಾರಾಷ್ಟ್ರದ ಆರು ಬಸ್ ಗಳ ಮೇಲೆ ಕಲ್ಲುತೂರಾಟ ಮಾಡಿದ್ದಾರೆ. ಈ ಘಟನೆ ಸಂಬಂಧ ಪೊಲೀಸರು 20 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ಎಸ್ ಪಿ ಭೀಮಾಶಂಕರ ಗುಳೇದ ತಿಳಿಸಿದರು.