ಬೆಳಗಾವಿ : ಇಲ್ಲಿಯ ಕೆಎಲ್ಇ ಸಂಸ್ಥೆಯ ಲಿಂಗರಾಜ ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶುಕ್ರವಾರ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿದರು.
ಅಲ್ಲಿನ ಆಡಳಿತ ವ್ಯವಸ್ಥೆ ಹಾಗೂ ಕೈದಿಗಳ ವಿವಿಧ ರೀತಿಯ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ಸಂಗ್ರಹಿಸಿದರು.
ಕೇಂದ್ರ ಕಾರಾಗೃಹದ ಅಧೀಕ್ಷಕ ವಿ.ಕೃಷ್ಣ ಮೂರ್ತಿ ಅವರು ಕಾರಾಗೃಹದ ಅಡಳಿತ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿ, ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರಿಸಿದರು.
ಸಮಾಜಶಾಸ್ತ್ರ ವಿಭಾಗದ ಒಟ್ಟು 80 ವಿದ್ಯಾರ್ಥಿಗಳು ವಿಭಾಗದ ಮುಖ್ಯಸ್ಥ ನವೀನ ಕಣಬರಗಿ, ಸಹ ಪ್ರಾಧ್ಯಾಪಕಿ ಸುಶ್ಮಿತಾ ಪೂಜಾರ ಅವರ ನೇತೃತ್ವದಲ್ಲಿ ಭೇಟಿ ನೀಡಿದ್ದರು.