ಬೆಳಗಾವಿ :
ಕೆ ಎಲ್ ಇ ಸಂಸ್ಥೆಯ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನ ಕ್ರೀಡಾ ವಿವಿಧ ಸಂಘಗಳ ಸಮಾರೋಪ ಸಮಾರಂಭವನ್ನು ಮಹಾವಿದ್ಯಾಲಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕೆ ಎಲ್ ಇ ಸಂಸ್ಥೆಯ ಬೆಳಗಾವಿ ಲಿಂಗರಾಜ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಹನುಮಂತ ಮೇಲಿನಮನಿ ಮಾತನಾಡಿ, ಇಂದಿನ ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿದರೆ ವ್ಯಕಿತ್ವ ವಿಕಸನವಾಗುತ್ತದೆ. ಸ್ಪರ್ಧೆ ಮನೋಭಾವನೆ ಜೊತೆಗೆ ಸೇವಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಪ್ರಸ್ತುತ ದಿನಮಾನದಲ್ಲಿ ವಿದ್ಯಾರ್ಥಿಗಳು ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯೆ ಪ್ರೊ. ಶ್ರೀದೇವಿ ಹಿರೇಮಠ ಮಾತನಾಡಿ, ಟಿವಿ ಮತ್ತು ಮೊಬೈಲ್ ಬಿಟ್ಟು ವಿದ್ಯಾರ್ಥಿಗಳು ಸತತ ಅಧ್ಯಯನಶೀಲರಾಗಬೇಕು ಎಂದು ಹೇಳಿದರು.
ಶೈಶಾ ಮತ್ತು ಸಂಗಡಿಗರು ಪ್ರಾರ್ಥಿಸಿದರು.ಪ್ರೊ.ಶಶಿಕಾಂತ ತಾರದಾಳೆ ಸ್ವಾಗತಿಸಿ, ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಪ್ರೊ.ಸುಧಾರಾಣಿ ಹುಲಮನಿ ಕ್ರೀಡಾ ವರದಿ ವಾಚಿಸಿದರು.ಪ್ರೊ ರಾಧಿಕಾ ಪಾರಿತೋಷಕ ಬಹುಮಾನ ವಿತರಣಾ ಕಾರ್ಯಕ್ರಮ ನಡೆಸಿಕೊಟ್ಟರು. ನಂದಿನಿ ಚೌಗಲಾ ವಂದಿಸಿದರು. ವೈಷ್ಣವಿ ಮತ್ತು ಉತ್ಕರ್ಷ ನಿರೂಪಿಸಿದರು.
ಈ ಸಮಾರಂಭದಲ್ಲಿ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ಬಳಗದವರು ಉಪಸ್ಥಿತರಿದ್ದರು.