ನವದೆಹಲಿ: ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10 ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.
ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಅವರು, ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆಸಲಾಗಿದ್ದ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದು, ಬೋರ್ಡ್ ಅರ್ಧವಾರ್ಷಿಕ ಪರೀಕ್ಷೆ ನಡೆಸಿದ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ. ಫಲಿತಾಂಶ ಪ್ರಕಟಿಸದಂತೆ’ ಆದೇಶಿಸಿದ್ದಾರೆ.
ಈ ರೀತಿಯ ವಿಧಾನವನ್ನು ಎಲ್ಲಿಯೂ ಅಳವಡಿಸಿಕೊಂಡಿಲ್ಲ. ಸರ್ಕಾರಕ್ಕೆ ವಿದ್ಯಾರ್ಥಿಗಳ
ಕಲ್ಯಾಣದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಉತ್ತಮ
ಶಾಲೆಗಳನ್ನು ತೆರೆಯಿರಿ. 8, 9 ಮತ್ತು 10 ನೇ ತರಗತಿಗಳಿಗೆ
ಅರ್ಧವಾರ್ಷಿಕ ಪರೀಕ್ಷೆಯನ್ನು ಯಾವುದೇ ಜಿಲ್ಲೆಯಲ್ಲಿ
ನಡೆಸದಿದ್ದರೆ, ಆ ಜಿಲ್ಲೆಗಳಲ್ಲಿ ನಡೆಸಲು ಅನುಮತಿ
ನೀಡುವುದಿಲ್ಲ ಎಂದು ನ್ಯಾಯಾಧೀಶರು ತಾಕೀತು
ಮಾಡಿದ್ದಾರೆ.