ಬೆಂಗಳೂರು: ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ ಬಾಬು ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಸಂಸದರಾಗಿ ಆಯ್ಕೆಯಾದ ಬಳಿಕ ಚನ್ನಪಟ್ಟಣದ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಧಾನಪರಿಷತ್ ನಲ್ಲಿ ಭೋಜೇಗೌಡ ಅವರನ್ನು ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸುರೇಶ ಬಾಬು ಆಯ್ಕೆ
