ರಾಮನಗರ :
ರಾಮನಗರ ಜಿಲ್ಲೆ ಮಾಗಡಿ ತಾಲ್ಲೂಕಿನ ಕಂಚುಗಲ್ ಬಂಡೆಮಠದ ಬಸವಲಿಂಗ ಸ್ವಾಮೀಜಿ (45) ನಿಗೂಢವಾಗಿ ಮೃತಪಟ್ಟಿದ್ದಾರೆ. ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಅವರ ಮೃತದೇಹ ಸೋಮವಾರ ಪತ್ತೆಯಾಗಿದೆ ಅವರ ಆತ್ಮಹತ್ಯೆ ಹಲವು ಸಂಶಯಗಳಿಗೆ ಕಾರಣವಾಗಿದೆ. ಕುದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.