ದುಬೈ: ದುಬೈನಲ್ಲಿ ನಡೆಯುತ್ತಿರುವ 2025 ರ T20 ಏಷ್ಯಾ ಕಪ್ನಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ ತಂಡದ ಏಳು ವಿಕೆಟ್ಗಳ ಗೆದ್ದ ನಂತರ ಮಾತನಾಡಿದ ಬಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್ ಅವರು ಈ ಗೆಲುವನ್ನು ಭಾರತದ ಸೇನಾ ಪಡೆಗಳಿಗೆ ಅರ್ಪಿಸಿದ್ದಾರೆ ಹಾಗೂ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವಿಗೀಡಾದ ಕುಟುಂಬಗಳ ಜೊತೆ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಪಂದ್ಯದ ನಂತರ ಮಾತನಾಡಿದ ಅವರು. ” ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕದಾಳಿಯಲ್ಲಿ ಮೃತಪಟ್ಟ ಕುಟುಂಬದ ಜೊತೆ ಒಗ್ಗಟ್ಟಾಗಿ ನಿಲ್ಲುತ್ತೇವೆ. ನಮ್ಮ ಎಲ್ಲಾ ಸಶಸ್ತ್ರ ಪಡೆಗಳಿಗೆ ಭಾರತದ ತಂಡದ ಗೆಲುವನ್ನು ಅರ್ಪಿಸಲು ಬಯಸುತ್ತೇವೆ. ಅವರು ನಮ್ಮೆಲ್ಲರಿಗೂ ಸ್ಫೂರ್ತಿ ನೀಡುತ್ತಲೇ ಇರುತ್ತಾರೆ ಎಂದು ಭಾವಿಸುತ್ತೇನೆ ಎಂದು ಹೇಳಿದ್ದಾರೆ.
ಏಪ್ರಿಲ್ನಲ್ಲಿ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ನಡೆಸಿದ ಪ್ರತೀಕಾರದ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ವಿರುದ್ಧದ ಪಂದ್ಯವನ್ನು ಭಾರತದ ತಂಡ ಬಹಿಷ್ಕರಿಸಬೇಕು ಎಂಬ ಒತ್ತಾಯದ ಮಧ್ಯೆಯೂ ಸೆಪ್ಟೆಂಬರ್ 14 ರ ಭಾನುವಾರದ ಗುಂಪು ಹಂತದ ಭಾರತ ಹಾಗೂ ಪಾಕಿಸ್ತಾನದ ನಡುವಿನ ಪಂದ್ಯ ನಡೆಯಿತು. ಭಾರತದ ತಂಡದ ನಾಯಕ ಸೂರ್ಯಕುಮಾರ ಯಾದವ್ ಅವರು ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಆಘಾ ಅವರ ಕೈಕುಲಕಲಿಲ್ಲ.
ಮತ್ತು ಪಾಕಿಸ್ತಾನದ ವಿರುದ್ಧ ಭಾರತದ ತಂಡವು ಏಳು ವಿಕೆಟ್ಗಳ ಭರ್ಜರಿ ಜಯಗಳಿಸಿದ ನಂತರ ಸೂರ್ಯಕುಮಾರ ತಮ್ಮ ಮಾತುಗಳಿಗೆ ಮಹತ್ವ ನೀಡಿದರು, ತಂಡದ ಗೆಲುವನ್ನು ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಿದರು ಮತ್ತು ಪಹಲ್ಗಾಮ್ ಭಯೋತ್ಪಾಕ ದಾಳಿಯಲ್ಲಿ ಮೃತಪಟ್ಟವರಿಗೆ ಗೌರವ ಸಲ್ಲಿಸಿದರು.