ಬೆಂಗಳೂರು : ತೀರ್ಥಹಳ್ಳಿ ತಹಶೀಲ್ದಾರ ಅವರು ಬೆಂಗಳೂರಿನ ಲಾಡ್ಜ್ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ತೀರ್ಥಹಳ್ಳಿ ತಹಶೀಲ್ದಾರ ಜಕ್ಕಣ್ಣ ಗೌಡರ್ (54) ಅವರು ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್ ಒಂದರಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ ಫೋನ್ ಕರೆಗೆ ಯಾವುದೇ ಪ್ರತಿಕ್ರಿಯೆ ನೀಡಿದ ಕಾರಣ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್ ಲೊಕೇಷನ್ ಚೆಕ್ ಮಾಡಿದಾಗ ಲಾಡ್ಜ್ನಲ್ಲಿ ಇರುವ ಕುರಿತು ಮಾಹಿತಿ ಲಭ್ಯವಾಗಿತ್ತು.ನಂತರ ಬಳಿಕ ಲಾಡ್ಜ್ನ ರೂಂಗೆ ಹೋಗಿ ನೋಡಿದಾಗ ಜಕ್ಕಣ್ಣ ಗೌಡರ್ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯವರಾದ ಜಕ್ಕಣ್ಣಗೌಡರು ತೀರ್ಥಹಳ್ಳಿಯಲ್ಲಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಸದ್ಯ ಅವರ ಶವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ ಒಂದು ವರ್ಷದಿಂದ ಜಕ್ಕಣ್ಣ ಗೌಡರ್ ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.