ಬೆಳಗಾವಿ : ಬೆಂಗಳೂರಿನಿಂದ ನಿಪ್ಪಾಣಿ ಬಳಿಯ ಅಕ್ಕೋಳಗೆ ತೆರಳುತ್ತಿರುವ ಸಂದರ್ಭದಲ್ಲಿ ಚಿಕ್ಕೋಡಿಯ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಅಮಿತ್ ರಾವ್ ಶಿಂಧೆ (35) ಅಪಘಾತದಲ್ಲಿ ಮೃತಪಟ್ಟ ಘಟನೆ ರವಿವಾರ ನಡೆದಿದೆ. ಕಿತ್ತೂರು ರಾಷ್ಟ್ರೀಯ ಹೆದ್ದಾರಿ 48ರ ಬಳಿ ಕೆಐಡಿಬಿ ಬಳಿ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.