ನವದೆಹಲಿ: ಭಾರತವು ಏಪ್ರಿಲ್ನಿಂದ ಜೂನ್ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ.
ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಕೆಲವು ಪ್ರದೇಶಗಳು ಸೇರಿದಂತೆ ರಾಜಸ್ಥಾನ, ಗುಜರಾತ್, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್ಗಢ, ತೆಲಂಗಾಣ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ಏಪ್ರಿಲ್ನಿಂದ ಜೂನ್ ತನಕ ಬಿಸಿ ಗಾಳಿ (Heatwave Alert) ಬೀಸುವ ಸಾಧ್ಯತೆ ಇದೆ ಎಂದು ಅದು ತಿಳಿಸಿದೆ.
ಮುಂದಿನ ದಿನಗಳಲ್ಲಿ ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಕಂಡು ಬರಲಿದೆ. ಹೆಚ್ಚಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಅಧಿಕವಾಗಿರಲಿದೆʼʼ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ (Mrutyunjay Mohapatra) ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೆಚ್ಚಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಆನ್ಲೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
“ಏಪ್ರಿಲ್ನಿಂದ ಜೂನ್ವರೆಗೆ, ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳು, ಮಧ್ಯ ಭಾರತ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಹೆಚ್ಚು ಶಾಖದ ದಿನಗಳನ್ನು ಅನುಭವಿಸುವ ನಿರೀಕ್ಷೆಯಿದೆ” ಎಂದು ಅವರು ಹೇಳಿದರು.
ಸಾಮಾನ್ಯವಾಗಿ, ಭಾರತವು ಏಪ್ರಿಲ್ನಿಂದ ಜೂನ್ ವರೆಗೆ ನಾಲ್ಕರಿಂದ ಏಳು ಶಾಖದ ದಿನಗಳನ್ನು ದಾಖಲಿಸುತ್ತದೆ.
ಈ ಬೇಸಿಗೆಯ ಋತುವಿನಲ್ಲಿ 9 ರಿಂದ 10 ಪ್ರತಿಶತದಷ್ಟು ಹೆಚ್ಚಿನ ವಿದ್ಯುತ್ ಬೇಡಿಕೆ ಪೂರೈಸಲು ಭಾರತ ಸಿದ್ಧವಾಗಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ, ದೇಶವು ಹೆಚ್ಚಿನ ಸಂಖ್ಯೆಯ ಶಾಖದ ದಿನಗಳನ್ನು ಅನುಭವಿಸುವ ನಿರೀಕ್ಷೆಯಿದೆ.
ಕಳೆದ ವರ್ಷ, ದೇಶದ ಗರಿಷ್ಠ ವಿದ್ಯುತ್ ಬೇಡಿಕೆಯು ಮೇ 30 ರಂದು 250 ಗಿಗಾವ್ಯಾಟ್ಗಳನ್ನು (GW) ದಾಟಿತ್ತು – ಇದು ಸಾಮಾನ್ಯಕ್ಕಿಂತ 6.3% ಹೆಚ್ಚಾಗಿತ್ತು. ಹವಾಮಾನ ಬದಲಾವಣೆಯಿಂದ ಉಂಟಾಗುವ ತಾಪಮಾನ ಹೆಚ್ಚಳವು ವಿದ್ಯುತ್ ಬೇಡಿಕೆಯನ್ನು ಹೆಚ್ಚಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
ಮುಂದಿನ ದಿನಗಳಲ್ಲಿ ವಾತಾವರಣದ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಬಿಸಿಲಾಘಾತದಿಂದ ರಕ್ಷಿಸಿಕೊಳ್ಳಲು ಬೆಳಗ್ಗೆ 11ರಿಂದ ಅಪರಾಹ್ನ 4ರ ತನಕ ಅನಿವಾರ್ಯವಲ್ಲದಿದ್ದರೆ ಮನೆಯಿಂದ ಹೊರಗಿಳಿಯುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು, ತಾಜಾ ಹಣ್ಣಿನ ರಸ ಸೇವಿಸಬೇಕು. ಪ್ರಯಾಣ ಮಾಡುವಾಗ ನೀರು ಜತೆಯಲ್ಲೇ ಒಯ್ಯಬೇಕು. ಆದಷ್ಟು ಮಸಾಲೆಯುಕ್ತ ಆಹಾರ ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.