ಚಿಂಚೋಳಿಯ ಮಾಯಮ್ಮ ದೇವಿ ದರ್ಶನ ಮುಗಿಸಿಕೊಂಡ ನಂತರ ಯಲ್ಲಮ್ಮನಗುಡ್ಡಕ್ಕೆ ತೆರಳಿ ದೇವರ ದರ್ಶನ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಬೆಳಗಾವಿ: ಬ್ಯಾಡಗಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂದಿನಿಂದ ಗುದ್ದಿದ ಪರಿಣಾಮ 13 ಜನರು ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ಪೂನಾ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ.
ನಿಂತಿದ್ದ ಲಾರಿಗೆ ಗುದ್ದಿದ ಪರಿಣಾಮ ಟಿಟಿ ವಾಹನ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ವಾಹನದಲ್ಲಿ ಮೃತದೇಹಗಳು ಅಪ್ಪಚ್ಚಿಯಾಗಿವೆ. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಅಗ್ನಿಶಾಮಕ ಇಲಾಖೆ ಸಿಬ್ಬಂದಿ ಹೊರ ತೆಗೆಯುತ್ತಿದ್ದಾರೆ. ಪೊಲೀಸರು ಮೃತರ ಹಿನ್ನಲೆ ಪತ್ತೆ ಹಚ್ಚುತ್ತಿದ್ದಾರೆ.
ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದವರು ಎಂದು ತಿಳಿದು ಬಂದಿದೆ. ಕಲಬುರಗಿ ಜಿಲ್ಲೆಯ ಚಿಂಚೊಳ್ಳಿ ಮಾಯಮ್ಮನ ದರ್ಶನ ಮಾಡಿಕೊಂದು ಸ್ವಗ್ರಾಮಕ್ಕೆ ವಾಪಾಸಾಗುವಾಗ ಈ ದುರ್ಘಟನೆ ಸಂಭವಿಸಿದೆ. ಮೃತಪಟ್ಟ 13 ಮಂದಿಯಲ್ಲಿ ಒಂದು ಮಗು ಇದೆ.
ಸ್ಥಳಕ್ಕೆ ಹಾವೇರಿ ಎಸ್ಪಿ ಅಂಶುಕುಮಾರ ಭೇಟಿ ನೀಡಿದ್ದಾರೆ. ಮೃತದೇಹಗಳನ್ನು ಟಿಟಿ ವಾಹನದಿಂದ ಅಗ್ನಿಶಾಮಕ ಮತ್ತು ಪೊಲೀಸ್ ಸಿಬ್ಬಂದಿ ಹೊರತೆಗೆದಿದ್ದು, ಗಾಯಾಳುಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದು ಭದ್ರಾವತಿಗೆ ಮರಳಿ ಹೋಗುತ್ತಿರುವಾಗ ತಡರಾತ್ರಿ 3.30ಗಂಟೆಗೆ ಈ ಭೀಕರ ಆಪಘಾತ ಸಂಭವಿಸಿದೆ