ಬೆಳಗಾವಿ :
ಶಿಕ್ಷಕರ ನೇಮಕಾತಿ ಹಗರಣದಿಂದ ಕೊನೆಗೂ ಸರಕಾರ ಕೊನೆಗೂ ಎಚ್ಚೆತ್ತಿದೆ. ರವಿವಾರ (ನವೆಂಬರ್ 6 ರಂದು) ನಡೆಯುವ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರಕಾರ ಮುಂದಾಗಿದೆ. ಪರೀಕ್ಷೆಗೆ ಹಾಜರಾಗುವ ಎಲ್ಲ ಅಭ್ಯರ್ಥಿಗಳು ಶೂ ಮತ್ತು ಬೆಲ್ಟ್ ಧರಿಸುವಂತಿಲ್ಲ ಎಂದು ಶಿಕ್ಷಣ ಇಲಾಖೆ ಇದೀಗ ಆದೇಶ ಹೊರಡಿಸಿದೆ. ಈ ಮೊದಲು ಕೆಲ ಸುತ್ತೋಲೆ ಹೊರಡಿಸಲಾಗಿತ್ತು. ಇದರಲ್ಲಿ ಬದಲಾವಣೆ ಮಾಡಲಾಗಿದೆ. ಪ್ರವೇಶ ಪತ್ರದಲ್ಲಿ ತಮ್ಮ ಸಹಿ ಮತ್ತು ಭಾವಚಿತ್ರ ಪ್ರಕಟವಾಗದಿರುವ, ಸಹಿ ಮತ್ತು ಭಾವಚಿತ್ರ ವ್ಯತ್ಯಾಸವಿರುವ ಅಭ್ಯರ್ಥಿಯು ತನ್ನೊಂದಿಗೆ ಆನ್ ಲೈನ್ ಅರ್ಜಿ, ತಮ್ಮ ಇತ್ತೀಚಿನ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಇಲ್ಲವೇ ಇತರ ಗುರುತು ಚೀಟಿಯನ್ನು ಪರೀಕ್ಷಾ ಕೇಂದ್ರದ ಅಧಿಕಾರಿಗಳಿಗೆ ತೋರಿಸುವಂತೆ ತಿಳಿಸಲಾಗಿದೆ.
ಬೆಳಗಾವಿಯ ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಕೆಟಿಇಟಿ ಪರೀಕ್ಷೆ: ನ.6 ರಂದು
ಪ್ರಸಕ್ತ 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನವೆಂಬರ್ 6 ರ ಭಾನುವಾರದಂದು ಬೆಳಗಾವಿ ನಗರ ವ್ಯಾಪ್ತಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಬೆಳಿಗ್ಗೆ ಹಾಗೂ
ಮಧ್ಯಾಹ್ನ ಎರಡು ಅಧಿವೇಶನಗಳಲ್ಲಿ ನಡೆಯಲಿದೆ. ಭಾನುವಾರ(ನ.6) ಬೆಳಗಾವಿ ನಗರ ವ್ಯಾಪ್ತಿಯ 29 ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ನಡೆಯಲಿದೆ. ಪತ್ರಿಕೆ-1ಬೆಳಿಗ್ಗೆ 9.30 ರಿಂದ 12 ರವೆಗೆ 23 ಕೇಂದ್ರಗಳಲ್ಲಿ ಹಾಗೂ ಪತ್ರಿಕೆ-2
ಮಧ್ಯಾಹ್ನ 2 ರಿಂದ ಸಂಜೆ 4.30 ರ ವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರದ ವಿಳಾಸಕ್ಕೆ ಸಂಬಂಧಿಸಿದಂತೆ ವಿವರ ಬೇಕಾದಲ್ಲಿ ಬೆಳಗಾವಿ ಉಪನಿರ್ದೇಶಕರ ಕಚೇರಿಯ ನೋಡಲ್ ಅಧಿಕಾರಿ ಮೃಣಾಲಿನಿ ಪಾಟೀಲ ಅವರ ಮೊಬೈಲ್ ಸಂಖ್ಯೆ 944988174 ನ್ನು ಸಂಪರ್ಕಿಸಬಹುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲ ತಿಳಿಸಿದ್ದಾರೆ.