ಬೆಳಗಾವಿ: ಇಲ್ಲಿಯ ಮೂಲ್ಯ ಯಾನೆ ಕುಲಾಲರ ಸಂಘದ 25 ನೇ ವಾರ್ಷಿಕೋತ್ಸವ ಮತ್ತು ಕ್ರೀಡಾಕೂಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಫೆಬ್ರವರಿ 9 ರಂದು ಬೆಳಗಾವಿ ಪೊಲೀಸ್ ಹೆಡ್ ಕ್ವಾಟ್ರಸ್ ನ ಶ್ರೀ ವೀರಭದ್ರ ದೇವಸ್ಥಾನದ ಸಭಾಭವನದಲ್ಲಿ ಏರ್ಪಡಿಸಲಾಗಿದೆ.
ಬೆಳಗ್ಗೆ 9 ಗಂಟೆಗೆ 25 ನೇ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ರೋಹಿತ್ ಕುಲಾಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. 10 ಗಂಟೆಗೆ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ಬೆಳಗಾವಿ ಉತ್ತರ ಶಾಸಕ ರಾಜು ಶೇಠ್ ಆಗಮಿಸುವರು. ನಿವೃತ ಸಿಪಿಐ ಶ್ರೀನಿವಾಸ ಹಾಂಡ ಸಭಾಧ್ಯಕ್ಷತೆ ವಹಿಸುವರು. ಜಿಲ್ಲಾ ವಾಲ್ಮೀಕಿ ಸಮಾಜದ ಅಧ್ಯಕ್ಷ ರಾಜಶೇಖರ ತಳವಾರ ಅತಿಥಿಯಾಗಿ ಆಗಮಿಸುವರು. ರೋಹಿತ್ವಕುಲಾಲ ಅಧ್ಯಕ್ಷತೆ ವಹಿಸುವರು. ಸಂಘದ ಸ್ಥಾಪಕ ಅಧ್ಯಕ್ಷ ಟಿ.ಕೆ. ಮೂಲ್ಯ, ಗೌರವ ಅಧ್ಯಕ್ಷ ಸತೀಶ ಮೂಲ್ಯ ಉಪಸ್ಥಿತರಿರುವರು. ಮನರಂಜನಾ ಕಾರ್ಯಕ್ರಮಗಳನ್ನು ಈ ಸಂದರ್ಭದಲ್ಲಿ ಏರ್ಪಡಿಸಲಾಗಿದೆ. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕೋರಲಾಗಿದೆ.