This is the title of the web page
This is the title of the web page

Live Stream

March 2023
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ಮರಾಠಿಗರಿಗೆ ಮಾರಾಟವಾದ ಬಿಜೆಪಿ: ಕರವೇ ಕ್ಷುದ್ರ BJP sold out to Marathas: Karave Kshudra


ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಪಕ್ಷ ಆಧಾರಿತ ಚುನಾವಣೆ ನಡೆಸಿ ಅಧಿಕಾರದ ಗದ್ದುಗೆ ಏರಿದ ಬಿಜೆಪಿ ಮಹಾಪೌರ ಮತ್ತು ಉಪ ಮಹಾಪೌರ ಎರಡೂ ಸ್ಥಾನಗಳನ್ನು ಮರಾಠಿ ಭಾಷಿಕರಿಗೆ ನೀಡುವ ಮೂಲಕ ಈ ರಾಜ್ಯದ ಕನ್ನಡಿಗರಿಗೆ ಮೋಸ ಮಾಡಿದೆ ಎಂದು ಕರವೇ ಜಿಲ್ಲಾಧ್ಯಕ್ಷ ದೀಪಕ ಗುಡಗನಟ್ಟಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮರಾಠಿ ಭಾಷಿಕರಿಗೆ ನೀಡಿರುವ ಬೆಳಗಾವಿ ನಗರದ ಬಿಜೆಪಿ ನಾಯಕರು ಈಗ ಬೆಳಗಾವಿ ಪಾಲಿಕೆ ಮಹಾಪೌರ/ಉಪ ಮಹಾಪೌರ ಎರಡೂ ಸ್ಥಾನಗಳನ್ನು ಮರಾಠಿ ಭಾಷಿಕರಿಗೆ ನೀಡುವ ಮೂಲಕ ಬಿಜೆಪಿ ಪಕ್ಷದಲ್ಲಿ ಕನ್ನಡಿಗರಿಗೆ ಯಾವುದೇ ಮಾನ್ಯತೆ ಇಲ್ಲ, ಬಿಜೆಪಿಗೆ ಮರಾಠಿ ಭಾಷಿಕರೇ ಮುಖ್ಯ ಎನ್ನುವದನ್ನು ಬಿಜೆಪಿ ನಾಯಕರು ಸಾಭೀತು ಮಾಡುವ ಮೂಲಕ ರಾಜ್ಯದ ಕನ್ನಡಿಗರಿಗೆ ಅವಮಾನ ಮಾಡಿದ್ದಾರೆ. ಬಿಜೆಪಿಯ ಅಸಲಿ ಮುಖ ಈಗ ಬಯಲಾಗಿದೆ ಎಂದು ದೀಪಕ ಗುಡಗನಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿಯ ಬಿಜೆಪಿ ನಾಯಕರಿಗೆ ಕನ್ನಡ ಭಾಷಿಕರ ಬಗ್ಗೆ ಕಳಕಳಿಯೂ ಇಲ್ಲ, ಕನ್ನಡಿಗರ ಬಗ್ಗೆ ಗೌರವವೂ ಇವರಿಗಿಲ್ಲ, ಬಿಜೆಪಿ ಪಕ್ಷಕ್ಕೆ ಮರಾಠಿ ಭಾಷಿಕರು ಮುಖ್ಯವಾಗಿದ್ದು, ಪಾಲಿಕೆಯಲ್ಲಿ ಬಿಜೆಪಿ ಗೆಲ್ಲಿಸಲು ಮತ ಚಲಾಯಿಸಿದ ಕನ್ನಡಿಗರಿಗೆ ಅವಮಾನಿಸುವ ಕೆಲಸವನ್ನು ಬಿಜೆಪಿ ನಾಯಕರು ಮಾಡಿದ್ದಾರೆ.
ರಾಜ್ಯದ ಜನ ಬಿಜೆಪಿಗೆ ಪಾಠ ಕಲಿಸುತ್ತಾರೆ ಎಂದು ದೀಪಕ ಗುಡಗನಟ್ಟಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿ ಕನ್ನಡಿಗರ ತಲೆ ಮೇಲೆ ಕೈ ಇಡುವ ಕೆಲಸ‌ ಮಾಡಿದೆ. ಇಬ್ಬರೂ ಬಿಜೆಪಿ ಶಾಸಕರು ಸಾಕಷ್ಟು ಬ್ಯಾಲೆನ್ಸ್ ಮಾಡಬಹುದಿತ್ತು. ಬಿಜೆಪಿ ತನ್ನಷ್ಟಕ್ಕೇ ತಾನೇ  ಸಂಕಷ್ಟ ಮಾಡಿಕೊಂಡಿದೆ.
-ಅಶೋಕ ಚಂದರಗಿ

ಬೆಳಗಾವಿ ಮಹಾನಗರ ಪಾಲಿಕೆ ಆವರಣದಲ್ಲಿ ನಾಡದ್ರೋಹಿ ಘೋಷಣೆ ಕೂಗಿದ ಮೂವರು ಎಂಇಎಸ್ ನಗರ ಸೇವಕರ ಸದಸ್ಯತ್ವವನ್ನು ಸರ್ಕಾರ ಕೂಡಲೇ ರದ್ದು ಮಾಡಬೇಕು ಜೊತೆಗೆ ಈ ನಾಡದ್ರೋಹಿಗಳನ್ನು ಬಂಧಿಸುವಂತೆ ಕರವೇ ಒತ್ತಾಯಿಸಿದೆ.


Jana Jeevala
the authorJana Jeevala

Leave a Reply