ಬೆಳಗಾವಿ:
ತಾಲೂಕಿನ ಸುಕ್ಷೇತ್ರ ಸುಳೇಭಾವಿ ಶ್ರೀ ಮಹಾಲಕ್ಷ್ಮೀ ದೇವಿಗೆ ಶ್ರಾವಣ ಮಾಸದ ಕೊನೆಯ ಮಂಗಳವಾರ ಸೆ. 12 ರಂದು ಉಡಿ ತುಂಬುವ ಕಾರ್ಯಕ್ರಮ ಹಾಗೂ ಪಲ್ಲಕ್ಕಿ ಉತ್ಸವ ನೆರವೇರಲಿದೆ.
ಪ್ರತಿ ವರ್ಷದಂತೆ ಈ ಸಲವೂ ಸಂಪ್ರದಾಯದಂತೆ ದೇವಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಲಿದೆ. ಸುಳೇಭಾವಿ ಗ್ರಾಮಸ್ಥರು ಮಂಗಳವಾರ ಬೆಳಗಿನ ಜಾವ 2 ಗಂಟೆಯಿಂದಲೇ ದೇವಸ್ಥಾನಕ್ಕೆ ಬಂದು ಉಡಿ ತುಂಬಲಿದ್ದಾರೆ. ಇಡೀ ದಿನ ದೇವಸ್ಥಾನ ಆವರಣದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.
ಸಂಜೆ ದೇವಿಯ ಪಲ್ಲಕ್ಕಿ ಉತ್ಸವ ನಡೆಯಲಿದೆ. ಪರ ಊರುಗಳಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆಯಲಿದ್ದಾರೆ.
ಶ್ರಾವಣ ಮಾಸದಲ್ಲಿ ಪ್ರತಿ ಸೋಮವಾರ ಮತ್ತು ಮಂಗಳವಾರ ವಾರ ಬಿಡುವ ಪದ್ಧತಿ ನಡೆದುಕೊಂಡು ಬಂದಿದ್ದು, ಇದು ಐದನೇ ವಾರವಾಗಿದೆ. ವಾರ ಪಾಲಿಸುವ ಪದ್ಧತಿಯಲ್ಲಿ ಗ್ರಾಮದಲ್ಲಿ ಎಲ್ಲ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿ ದೇವರ ಆರಾಧನೆ ಮಾಡಲಾಗುತ್ತದೆ. ಗ್ರಾಮದ ಶ್ರೀ ಕಲ್ಮೇಶ್ವರ ದೇವರು ಸೇರಿದಂತೆ ಎಲ್ಲ ದೇವರಿಗೂ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.